ನರೇಂದ್ರ ಪದವಿ ಪೂರ್ವ ಕಾಲೇಜು: ಕಟ್ಟಡದ ಭೂಮಿಪೂಜಾ ಹಾಗೂ ಶಿಲಾನ್ಯಾಸ ಕಾರ್ಯಕ್ರಮ

ನರೇಂದ್ರ ಪದವಿ ಪೂರ್ವ ಕಾಲೇಜು ಪುತ್ತೂರು ಇದರ ಉದ್ದೇಶಿತ ಕಟ್ಟಡದ ಭೂಮಿಪೂಜಾ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ದಿನಾಂಕ 17/02/2018 ಬೆಳಗ್ಗೆ ಸಮಯ 8.30 ಕ್ಕೆ ನಡೆಯಿತು. ಶಿಲಾನ್ಯಾಸ ಕಾರ್ಯಕ್ರಮವನ್ನು ನಡೆಸಿಕೊಟ್ಟವರು ಶ್ರೀ ಅನಂತಕುಮಾರ್ ಹೆಗಡೆ, ಕೌಶಲ್ಯ ಅಭಿವೃದ್ಧಿ ಹಾಗೂ ವಾಣಿಜ್ಯೋದ್ಯಮ ಸಚಿವರು ಭಾರತ ಸರಕಾರ. ತದ ನಂತರ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮವು ಜರುಗಿತು.

10

12

14

19

9

20

1

3

4

5

7

8

ಸಭೆಯ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ) ದ ಅಧ್ಯಕ್ಷರಾಗಿರುವ ಶ್ರೀಯುತ ಡಾ| ಪ್ರಭಾಕರ ಭಟ್ ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾನ್ಯ ಶ್ರೀ ಅನಂತಕುಮಾರ್ ಹೆಗಡೆ ಉಪಸ್ಥಿತರಿದ್ದರು. ಅದೇ ರೀತಿ ವೇದಿಕೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ(ರಿ)ದ ಕಾರ್ಯದರ್ಶಿಗಳಾದ ಡಾ| ಕೆ ಎಮ್.ಕೃಷ್ಣ ಭಟ್ , ನರೇಂದ್ರ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ರೂಪಲೇಖಾ, ಸಂಚಾಲಕರಾದ ವಿಜಯಕೃಷ್ಣ ಭಟ್.ಡಿ , ಹಾಗೂ ಪ್ರಾಂಶುಪಾಲರಾದ ಶ್ರೀ ಅನಿಲ್ ಕುಮಾರ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾದ ಶ್ರೀ ಅನಂತ ಕುಮಾರ್ ಹೆಗಡೆ ಇವರು ಮಕ್ಕಳಲ್ಲಿ ಕ್ರಿಯಾಶೀಲತೆಯನ್ನು ಬೆಳೆಸುವ ಶಿಕ್ಷಣದ ಕುರಿತು ಮಾಹಿತಿಯನ್ನು ನೀಡಿದರು. ಅದೇ ರೀತಿ 3D ಪ್ರಿಂಟಿಂಗ್, VERTICAL FARMING, DISTANCE EDUCATION, SMART TECHNOLOGYಯನ್ನು ಯಾವ ರೀತಿ ಶಿಕ್ಷಣದಲ್ಲಿ ಉಪಯೋಗಿಸಬಹುದು ಎಂಬ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷರಾದ ಶ್ರೀ ಡಾ| ಪ್ರಭಾಕರ ಭಟ್ ಕಲ್ಲಡ್ಕ ಅಧ್ಯಕ್ಷೀಯ ಭಾಷಣವನ್ನು ಮಾಡಿದರು.

ನರೇಂದ್ರ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿರುವ ಶ್ರೀಮತಿ ರೂಪಲೇಖಾ ರವರು ಸ್ವಾಗತ ಭಾಷಣ ಮಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ನರೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥನೆಯನ್ನು ಮಾಡಿದರು. ನರೇಂದ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಅನಿಲ್ ಕುಮಾರ್ ಧನ್ಯವಾದ ಸಮರ್ಪಣೆ ಮಾಡಿದರು. ಹಾಗೆಯೇ ನರೇಂದ್ರ ಪದವಿ ಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕಿ ರಶ್ಮಿ ಎ. ಹಾಗೂ ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ವಿನಯಾ ಬಿ ಇವರು ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು.

Highslide for Wordpress Plugin