ಕಲಾ ವಿಭಾಗದಲ್ಲಿ ಸಾಗರದಷ್ಟು ಅವಕಾಶವಿದೆ: ಡಾ. ಪೀಟರ್ ವಿಲ್ಸನ್ ಪ್ರಭಾಕರ್

Leaf
Leaf

ಪುತ್ತೂರು, ಏ.28: ಅಂಕಪಟ್ಟಿಯ ಅಂಕಗಳಿಗಿಂತ ನಮ್ಮ ಕೌಶಲ್ಯ ಜೀವನಕ್ಕೆ ಅಗತ್ಯ. ಹೆಚ್ಚಿನ ಕೌಶಲ್ಯವನ್ನು ಅಭ್ಯಸಿಸಿದಷ್ಟು ನಮ್ಮ ಪದವಿಗೆ ಹೆಚ್ಚಿನ ಬೆಲೆ ಸಿಗುತ್ತದೆ. ಪದವಿಯ ಜೊತೆ ಜೊತೆಗೆ ಬೇರೆ ಬೇರೆ ಸರ್ಟಿಫಿಕೇಟ್ ಕೋರ್ಸ್‍ಗಳನ್ನು ಮಾಡುವುದರಿಂದ ಕೆಲಸವನ್ನು ಪಡೆಯಲು ಸುಲಭವಾಗುತ್ತದೆ. ಅದೇ ರೀತಿ ವಿದೇಶಿ ಭಾಷೆಗಳನ್ನು ಕಲಿಯುವುದರಿಂದ ಬೇರೆ ದೇಶಗಳಲ್ಲಿ ಬದುಕು ಕಟ್ಟಿಕೊಳ್ಳಲು ಸಹಕಾರಿ. ಆನ್‍ಲೈನ್ ಕೋರ್ಸ್‍ಗಳು ಕೆಲಸವನ್ನು ಪಡೆಯಲು ಇರುವ ಸುಲಭೋಪಾಯ. ನಮ್ಮ ವೃತ್ತಿಜೀವನಕ್ಕೆ ಉಪಯೋಗವಾಗುವ ಕೋರ್ಸ್‍ಗಳನ್ನು ಆಯ್ಕೆಮಾಡಿಕೊಳ್ಳುವುದು ನಮ್ಮ ಜವಾಬ್ದಾರಿ ಎಂದು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ ಪುತ್ತೂರು ಇಲ್ಲಿನ ನಿವೃತ್ತ ಪ್ರಾಂಶುಪಾಲರಾದ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಹೇಳಿದರು.
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ತರಬೇತಿ ಹಾಗೂ ಉದ್ಯೋಗ ಘಟಕ ಮತ್ತು ಐಕ್ಯೂಎಸಿ ಘಟಕದ ಸಹಯೋಗದಲ್ಲಿ ನಡೆದ “ಹೈಯರ್ ಎಜುಕೇಶನ್ ರೋಡ್‍ಮ್ಯಾಪ್- ಚೂಸಿಂಗ್ ದ ರೈಟ್ ಪಾಥ್” ಎಂಬ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದ ಇವರು, ಪದವಿಯ ನಂತರ ನಮ್ಮಲ್ಲಿ ಹಲವಾರು ರೀತಿಯ ಗೊಂದಲಗಳು ಸೃಷ್ಟಿಯಾಗುತ್ತದೆ. ಕೆಲಸಕ್ಕೆ ತೆರಳುವುದು, ಉನ್ನತ ವ್ಯಾಸಂಗ ಮಾಡುವುದು ಹೀಗೆ ಪ್ರಶ್ನೆಗಳು ಮೂಡುತ್ತವೆ. ಉನ್ನತ ವ್ಯಾಸಂಗಕ್ಕೆ ನಮ್ಮೆದುರಲ್ಲಿ ಸಾಕಷ್ಟು ಅವಕಾಶಗಳಿವೆ. ಅದನ್ನು ಸರಿಯಾಗಿ ಗುರುತಿಸಿ ಆಯ್ಕೆ ಮಾಡಿಕೊಳ್ಳುವ ಜವಾಬ್ದಾರಿ ನಮ್ಮದು ಎಂದರು.
ಕಾರ್ಯಕ್ರಮದಲ್ಲಿ ಭಾರತೀಯ ಸಂಸ್ಕøತಿ ಮತ್ತು ಲಲಿತ ಕಲೆಗಳ ಅಧ್ಯಯನ ಕೇಂದ್ರದ ಸಂಯೋಜಕಿ ಡಾ. ವಿದ್ಯಾ ಎಸ್, ವಿವಿಧ ವಿಭಾಗಗಳ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಸ್ನಾತಕೋತ್ತರ ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿ ಡಾ. ಸ್ಮಿತಾ.ಕೆ. ರೈ ನಿರೂಪಿಸಿ, ಸಮಾಜಶಾಸ್ತ್ರ ವಿಭಾಗದ ಉಪನ್ಯಾಸಕಿ ಜ್ಯೋತಿ ಎಡಪಡಿತ್ತಾಯ ವಂದಿಸಿದರು.

Leave a Reply

Your email address will not be published. Required fields are marked *

Related News

Events
29/04/2025

ಕಾರ್ಮಿಕ ಭವಿಷ್ಯ ನಿಧಿ ಮತ್ತು ರಾಜ್ಯಕಾರ್ಮಿಕರ ವಿಮಾ ಯೋಜನೆಯ ಬಗ್ಗೆ ಮಾಹಿತಿಕಾರ್ಯಾಗಾರ

News
25/04/2025

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ & ಟೆಕ್ನಾಲಜಿಯ ಪುರುಷರ ವಾಲಿಬಾಲ್ ತಂಡವು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಮಂಗಳೂರು ವಿಭಾಗ ಮಟ್ಟದ ಅಂತರ್ಕಾಲೇಜು ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ

News
22/04/2025

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪುರುಷರ ಕಬಡ್ಡಿ ತಂಡವು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿಕೊಂಡಿದೆ.