ಜಿಲ್ಲಾ ಶೈಕ್ಷಣಿಕ ಸಹಮಿಲನ ಕಾರ್ಯಕ್ರಮದ ಸಮಾರೋಪ ಸಮಾರಂಭ – 11-07-2015

Leaf
Leaf

ಶಿಕ್ಷಕರು ತಮ್ಮ ನಡೆನುಡಿಗಳಲ್ಲಿ ವಿದ್ಯಾರ್ಥಿಗಳಿಗೆ ಆದರ್ಶವಾಗಿರಬೇಕು. ಅಧ್ಯಾಪಕರು ವಿದ್ಯಾರ್ಥಿಯ ಜೊತೆಯಲ್ಲಿದ್ದು ಗುಣನಡತೆ ತಿದ್ದುವುದಲ್ಲದೆ ದೇಶಕ್ಕಾಗಿ ಬದುಕುವುದನ್ನು ಕಲಿಸಿಕೊಡಬೇಕು ಎಂದು ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ಡಾ| ಪ್ರಭಾಕರ ಭಟ್ ಹೇಳಿದರು.

ಅವರು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ವಿದ್ಯಾಭಾರತಿ ಕರ್ನಾಟಕದ ದ.ಕ. ಜಿಲ್ಲಾ ಶೈಕ್ಷಣಿಕ ಸಹಮಿಲನ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

DSCN0246

ಭಾರತದ ಮಕ್ಕಳು ಇತರ ದೇಶಗಳ ಮಕ್ಕಳಿಗಿಂತಲೂ ಬುದ್ಧಿವಂತರು. ಪ್ರತಿಯೊಂದು ಮಗುವಿನಲ್ಲಿಯೂ ವಿಶೇಷತೆ ಇದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ಶಿಕ್ಷಕರಿಂದ ಆಗಬೇಕು. ಭಾರತೀಯ ಕುಟುಂಬ ಪದ್ಧತಿಯಲ್ಲಿ ಬೆಳೆಯುವ ಮಕ್ಕಳು ಹಿರಿಯರ ಬಗ್ಗೆ ಗೌರವ ಹೊಂದಿರುತ್ತಾರೆ. ಅವರಿಗೆ ಸೂಕ್ತ ಮಾರ್ಗದರ್ಶನ ಶಿಕ್ಷಕರಿಂದ ಸಿಗಬೇಕು ಎಂದರು.

ರಾಮಾಯಣ, ಮಹಾಭಾರತ, ಭಗವದ್ಗೀತೆ, ಯೋಗದ ಬಗ್ಗೆ ಶಾಲೆಗಳಲ್ಲಿ ಶಿಕ್ಷಣದ ಅಗತ್ಯವಿದೆ. ಕಾಲ ಬದಲಾಗಿಲ್ಲ. ನಡವಳಿಕೆಯಲ್ಲಿ ಬದಲಾಗಿದ್ದು ಅದನ್ನು ಸರಿಪಡಿಸುವ ವ್ಯವಸ್ಥೆ ಶಿಕ್ಷಣದಿಂದ ಆಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ವಿದ್ಯಾಭಾರತಿ ಜಿಲ್ಲಾಧ್ಯಕ್ಷ ಪ್ರೊ|| ಎಂ.ಬಿ.ಪುರಾಣಿಕ್ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾಭಾರತಿ ಕರ್ನಾಟಕ ಪ್ರಾಂತ ಸಹಕಾರ್ಯದರ್ಶಿ ವಸಂತ ಮಾಧವ, ಜಿಲ್ಲಾ ಉಪಾಧ್ಯಕ್ಷ ವೆಂಕಟರಮಣರಾವ್ ಕಡಬ, ಕಾರ್ಯದರ್ಶಿ ಲೋಕಯ್ಯ ಡಿ, ಶ್ರೀರಾಮ ವಿದ್ಯಾಕೇಂದ್ರ ಅಧ್ಯಕ್ಷ ನಾರಾಯಣ ಸೋಮಯಾಜಿ ಉಪಸ್ಥಿತರಿದ್ದರು.
ಸರಸ್ವತಿ ಪ್ರಾಥಮಿಕ ಶಾಲೆ, ಕಡಬದ ಮಾಧವ ಸ್ವಾಗತಿಸಿದರು. ಮುಖ್ಯೋಪಾಧ್ಯಾಯರಾದ ಶ್ರೀ ರಮೇಶ್ ಎನ್. ವಂದಿಸಿದರು. ಜಿನ್ನಪ್ಪ ಏಳ್ತಿಮಾರ್ ನಿರೂಪಿಸಿದರು.

Leave a Reply

Your email address will not be published. Required fields are marked *

Related News

News and Events
24/03/2025

ವಿವೇಕಾನಂದ ಕಾಲೇಜಿನಲ್ಲಿ ಕಾಲೇಜು ವಾರ್ಷಿಕೋತ್ಸವ

Uncategorized
24/03/2025

ವಿವೇಕಾನಂದ ಕಾಲೇಜಿನಲ್ಲಿ ‘ಸಪ್ತಪರ್ಣೋತ್ಸವ’ ವಿದ್ಯಾರ್ಥಿ ಸಂಘದ ದಿನಾಚರಣೆ

Events
24/03/2025

ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಭಾರತ್ ಭೋದ್ ಮಾಲ ಕಾರ್ಯಕ್ರಮ