ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕ ಪರಂಪರೆಯನ್ನು ಒಳಗೊಂಡ ಆಧುನಿಕ ಶಿಕ್ಷಣ ಸೌಲಭ್ಯವನ್ನು ಒದಗಿಸುವುದು ಈ ಸಂಸ್ಥೆಯ ಉದ್ದೇಶ.ಆಧುನಿಕ ಹಾಗೂ ಸ್ಪರ್ಧಾತ್ಮಕ ಜಗತ್ತಿಗೆ ವಿದ್ಯಾರ್ಥಿಗಳನ್ನು ಅಣಿಗೊಳಿಸಿಕೊಳ್ಳಲು ಶಿಕ್ಷಣ ಕ್ಷೇತ್ರದಲ್ಲಿ ಅಪರಿಮಿತ ಅವಕಾಶಗಳಿದ್ದು ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು.ಸಮಾಜದ ಆಸ್ತಿಗಳಾಗಿ ಹೊರಹೊಮ್ಮಬೇಕಾಗಿದೆ ಎಂದು ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ‍್ಯದರ್ಶಿಗಳಾದ ಡಾ. ಕೆ. ಎಂ. ಕೃಷ್ಣ ಭಟ್ ರವರು ಹೇಳಿದರು.