ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಸುಜಿತ್‌ಗೆ ಸನ್ಮಾನ

Leaf
Leaf

ಜನವರಿ 26ರಂದು ನವದೆಹಲಿಯಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ನಡೆದ ಪ್ರಧಾನಮಂತ್ರಿಗಳ ಪಥಸಂಚಲನದಲ್ಲಿ ಭಾಗವಹಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಪ್ರಸ್ತುತ ವಿವೇಕಾನಂದ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಎನ್.ಸಿ.ಸಿ ಕೆಡೆಟ್‌ JUO ಸುಜಿತ್‌ ಇವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ಇವರು 4/19 KAR BN NCC MADIKERI̧ KARNATAKA & GOA DIRECTORATE ನ್ನು ಪ್ರತಿನಿಧಿಸಿ ಪಥಸಂಚಲನಕ್ಕೆ ಆಯ್ಕೆಯಾಗಿದ್ದರು. ಕಡಬ ತಾಲೂಕಿನ ರುಕ್ಮಯ್ಯ ಗೌಡ ಹಾಗೂ ಗೀತಾ ದಂಪತಿಗಳ ಪುತ್ರರಾಗಿರುವ ಇವರು ತಮ್ಮ ಪ್ರೌಢಶಾಲಾ ವಿದ್ಯಾಭ್ಯಾಸವನ್ನು ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಶಾಲೆಯಲ್ಲಿ ಪೂರೈಸಿರುತ್ತಾರೆ. ಇವರನ್ನು ಕಾಲೇಜಿನ ಪ್ರಾಂಶುಪಾಲರಾದ ಮಹೇಶ್‌ ನಿಟಿಲಾಪುರ, ಉಪಪ್ರಾಂಶುಪಾಲರಾದ ದೇವಿಚರಣ್‌ ರೈ, ಉಪನ್ಯಾಸಕ ಉಪನ್ಯಾಸಕೇತರ ವೃಂದದವರು ಸನ್ಮಾನಿಸಿ, ಅಭಿನಂದಿಸಿರುತ್ತಾರೆ.

Leave a Reply

Your email address will not be published. Required fields are marked *

Related News

News
06/03/2026

ದೇಶವೇ ಪ್ರಥಮ ಆದ್ಯತೆಯಾಗಿರಲಿ-ಡಾ. ಕಲ್ಲಡ್ಕ ಪ್ರಭಾಕರ ಭಟ್

News and Events
06/03/2026

ವಿವೇಕಾನಂದ ಕಾಲೇಜಿನಲ್ಲಿ “ವಿವೇಕ ಉದ್ಯೋಗ ಮೇಳ”

News
06/03/2026

ವಿವೇಕಾನಂದ ಕಾಲೇಜಿನಲ್ಲಿ ಶಿವಾಜಿ ಜೀವನ ಚರಿತ್ರೆ ವಿಚಾರ ಸಂಕಿರಣ