
ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ ಹಿರಿಯ ವಿದ್ಯಾರ್ಥಿಗಳ ಸಮಾವೇಶವನ್ನು ಆಯೋಜಿಸಲಾಯಿತು. ಭಾರತ ಮಾತೆಗೆ ಪುಷ್ಪಾರ್ಚನೆಗೈದು ಪ್ರಾರಂಭಗೊಂಡ ಈ ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಅರುಣ್ ಕುಮಾರ್ ರೈ ಪ್ರಧಾನ ಕಾರ್ಯದರ್ಶಿಯಾದ ಅಜೇಯ ಪೈ, ಆಡಳಿತ ಮಂಡಳಿಯ ಅಧ್ಯಕ್ಷರಾದ ವಿಶ್ವೇಶ್ವರ ಭಟ್ ಬಂಗಾರಡ್ಕ, ಸಂಚಾಲಕರಾದ ಮಹಾದೇವ ಶಾಸ್ತ್ರಿ ಮಣಿಲ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಡಳಿತ ಮಂಡಳಿಯ ಸದಸ್ಯರಾದ ರವಿ ಮುಂಗ್ಲಿ ಮನೆ ಸದಸ್ಯರಾದ ಈಶ್ವರ ಚಂದ್ರ, ಪ್ರಾಂಶುಪಾಲರಾದ ಮುರಳೀಧರ್ ಯಸ್ ಅನೇಕ ವಿದ್ಯಾರ್ಥಿಗಳು ಉಪನ್ಯಾಸಕ ಉಪನ್ಯಾಸಕೇತರ ವರ್ಗದವರು ಭಾಗವಹಿಸಿದ್ದರು.
ಮೊದಲಿಗೆ ಪ್ರಾಂಶುಪಾಲರಾದ ಮುರಳೀಧರ್ ಯಸ್ ತಮ್ಮ ಪ್ರಾಸ್ತವಿಕ ಭಾಷಣದಲ್ಲಿ ಮಾತನಾಡುತ್ತಾ “1986 ರಲ್ಲಿ ಶ್ರೀಯುತ ಉರಿ ಮಜಲು ರಾಮ್ ಭಟ್ ರವರ ನೇತೃತ್ವದಲ್ಲಿ ಪ್ರಾರಂಭವಾದ ಈ ಸಂಸ್ಥೆಯಲ್ಲಿ ಹಲವಾರು ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಪೂರೈಸಿ ದೇಶವಿದೇಶಗಳಲ್ಲಿ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಹಾಗೂ ತಮ್ಮದೇ ಆದ ಉದ್ಯಮೆಗಳನ್ನು ಕೈಗೊಂಡು ಉತ್ತಮ ಜೀವನವನ್ನು ನಡೆಸುತ್ತಿದ್ದಾರೆ ನೀವೆಲ್ಲರೂ ಈ ವಿದ್ಯಾಸಂಸ್ಥೆಯೊಂದಿಗೆ ಕೈಜೋಡಿಸಿ ಉತ್ತಮ ಬಾಂಧವ್ಯವನ್ನು ಇಟ್ಟುಕೊಳ್ಳಬೇಕು ನಿಮ್ಮ ಬರುವಿಕೆ ನಮಗೆ ಸಂತೋಷ ಕೊಟ್ಟಿದೆ” ಎಂದು ನುಡಿದರು.
ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿಗಳೆಲ್ಲರೂ ತಮ್ಮ ಭಾವನಾತ್ಮಕ ಅನುಭವಗಳನ್ನು ಹಂಚಿಕೊಂಡರು.
ಅರುಣ್ ಕುಮಾರ್ ಅಧ್ಯಕ್ಷರು ಹಿರಿಯ ವಿದ್ಯಾರ್ಥಿ ಸಂಘ ಇವರು ಎಲ್ಲಾ ಹಿರಿಯ ವಿದ್ಯಾರ್ಥಿಗಳನ್ನು ಸೇರಿಸಿ ಜೋಡಿಸುವ ಕೆಲಸವನ್ನು ಮಾಡೋಣ ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಆಡಳಿತ ಮಂಡಳಿಯ ಅಧ್ಯಕ್ಷರಾದ ವಿಶ್ವೇಶ್ವರ ಭಟ್ ಬಂಗಾರಡ್ಕ ಮಾತನಾಡುತ್ತಾ “ಹಿರಿಯ ವಿದ್ಯಾರ್ಥಿಗಳನ್ನು ಜೋಡಿಸಿಕೊಂಡು ಸಂಸ್ಥೆಯನ್ನು ಬೆಳೆಸೋಣ”ಎಂದು ಕರೆಕೊಟ್ಟರು. ಮುಖ್ಯ ಅತಿಥಿಗಳಾದ ಆಡಳಿತ ಮಂಡಳಿಯ ಸದಸ್ಯರಾದ ರವಿ ಮುಂಗ್ಲಿ ಮನೆ ಮಾತನಾಡುತ್ತಾ “ಸರಿಯಾದ ವೇದಿಕೆ ಹಾಗೂ ಪೂರಕ ವಾತಾವರಣದೊಂದಿಗೆ ಮಾಡುವ ಕೆಲಸದಲ್ಲಿ ಪೂರ್ಣವಿಶ್ವಾಸವನ್ನು ಇಟ್ಟುಕೊಂಡು ಕೆಲಸ ಮಾಡೋಣ ಸಂಸ್ಥೆಯ ಮೇಲೆ ಗೌರವವನ್ನು ಇಟ್ಟು ಅದರ ಉನ್ನತಿಗೆ ಶ್ರಮಿಸೋಣ” ಎಂದರು.
ಈ ಕಾರ್ಯಕ್ರಮದ ಪ್ರಾರಂಭದಲ್ಲಿ ಹಿರಿಯ ವಿದ್ಯಾರ್ಥಿನಿ ಹಾಗೂ ಹಿರಿಯ ಉಪನ್ಯಾಸಕಿ ಜಯಲಕ್ಷ್ಮಿ ಪ್ರಾರ್ಥಿಸಿದರು. ವಿನ್ಯಾಸ್ ಸ್ವಾಗತಿಸಿದರು.ಅಜೇಯ ಪೈ ವಂದಿಸಿದರು. ಅನ್ವಿತ ಕಾರ್ಯಕ್ರಮ ನಿರೂಪಿಸಿದರು.
Lorem ipsum dolor sit amet, consectetur adipiscing elit. Ut elit tellus, luctus nec ullamcorper mattis, pulvinar dapibus leo.
Lorem ipsum dolor sit amet, consectetur adipiscing elit. Ut elit tellus, luctus nec ullamcorper mattis, pulvinar dapibus leo.