ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶ

Leaf
Leaf

ಪುತ್ತೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ 2024-25ನೇ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳÀ ಫಲಿತಾಂಶವು ಪ್ರಕಟಗೊಂಡಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳು 100% ಫಲಿತಾಂಶದೊಂದಿಗೆ ಅಭೂತಪೂರ್ವ ಸಾಧನೆಯನ್ನು ಮಾಡಿದ್ದಾರೆ. ಇದೇ ತಿಂಗಳಿನಲ್ಲಿ ನಡೆದ ಪರೀಕ್ಷೆಗೆ ಕಾಲೇಜಿನಿಂದ ಒಟ್ಟು 372 ವಿದ್ಯಾರ್ಥಿಗಳು ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕಾಲೇಜಿನ ವಿಭಾಗವಾರು ಫಲಿತಾಂಶಗಳ ಪೈಕಿ ಕಂಪ್ಯೂಟರ್ ಸೈನ್ಸ್-100%, ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ 100%, ಡಾಟಾಸೈನ್ಸ್- 100%, ಇಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್- 100%, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ- 100% ಹಾಗೂ ಸಿವಿಲ್ ಇಂಜಿನಿಯರಿಂಗ್ ವಿಭಾಗ- 100% ಫಲಿತಾಂಶವನ್ನು ದಾಖಲಿಸಿವೆ.
ಎಲ್ಲಾ ಅರ್ಹ ವಿದ್ಯಾರ್ಥಿಗಳು ಕ್ಯಾಂಪಸ್ ನೇಮಕಾತಿಯ ಮೂಲಕ ವಿವಿಧ ಕಂಪೆನಿಗಳಿಗೆ ಆಯ್ಕೆಯಾಗಿದ್ದು, ಕೆಲವು ವಿದ್ಯಾರ್ಥಿಗಳು ಈಗಾಗಲೇ ಉದ್ಯೋಗಕ್ಕೆ ಸೇರಿಕೊಂಡಿದ್ದಾರೆ.
ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಿ ಉತ್ತಮ ಫಲಿತಾಂಶವನ್ನು ಪಡೆದುಕೊಂಡ ವಿದ್ಯಾರ್ಥಿಗಳ ಸಾಧನೆಯನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು ಮತ್ತು ಸಿಬ್ಬಂದಿಗಳು ಶ್ಲಾಘಿಸಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Related News

News
06/03/2026

ದೇಶವೇ ಪ್ರಥಮ ಆದ್ಯತೆಯಾಗಿರಲಿ-ಡಾ. ಕಲ್ಲಡ್ಕ ಪ್ರಭಾಕರ ಭಟ್

News and Events
06/03/2026

ವಿವೇಕಾನಂದ ಕಾಲೇಜಿನಲ್ಲಿ “ವಿವೇಕ ಉದ್ಯೋಗ ಮೇಳ”

News
06/03/2026

ವಿವೇಕಾನಂದ ಕಾಲೇಜಿನಲ್ಲಿ ಶಿವಾಜಿ ಜೀವನ ಚರಿತ್ರೆ ವಿಚಾರ ಸಂಕಿರಣ