
ಕಡಬ ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಮತ್ತು ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಜಂಟಿಯಾಗಿ 26ನೇ ವರ್ಷದ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮವನ್ನು ಹನುಮಾನ್ ನಗರದ ಯಾದವಶ್ರೀ ಸಭಾಂಗಣದಲ್ಲಿ ಜುಲೈ 28ರಂದು ನಡೆಸಲಾಯಿತು.
ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸರಸ್ವತೀ ವಿದ್ಯಾಲಯ ಕನ್ನಡ ಮಾಧ್ಯಮದ ಆಡಳಿತ ಮಂಡಳಿ ಸದಸ್ಯರು, ಪ್ರೌಢ ವಿಭಾಗದ ಮೇಲ್ವಿಚಾರಕರು ಆಗಿರುವ ಶ್ರೀಮತಿ ಪುಲಸ್ತ್ಯ ರೈ ವಹಿಸಿ ಸೈನಿಕರಲ್ಲಿರುವ ಕೆಚ್ಚೆದೆ ಅವರನ್ನು ಗಡಿಯಲ್ಲಿ ಬದುಕಿಸುತ್ತದೆ ಇಂತಹ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ದೇಶ ಸೇವೆಯ ಭಾವನೆಯನ್ನು ಬೆಳಿಸಿಕೊಳುವಂತಾಗಬೇಕು ಎಂದು ಅಧ್ಯಕ್ಷೀಯ ನುಡಿಗಳನ್ನಾಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಿವೃತ್ತ ಯೋಧರಾದ ಶ್ರೀ ಸುಂದರ ಗೌಡ ಶೆಟ್ಲಬೈಲು ಆಗಮಿಸಿ ವಿದ್ಯಾರ್ಥಿಗಳು ದೇಶ ಸೇವೆಯಿಂದ ವಂಚಿತರಾಗಬಾರದು. ಸದೃಢ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವವಾದದ್ದು ಎಂದು ಅತಿಥಿ ನೆಲೆಯಲ್ಲಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಅತಿಥಿಗಳು ಹಾಗೂ ವಿದ್ಯಾರ್ಥಿ ಪದಾಧಿಕಾರಿಗಳಿಂದ ಕಾರ್ಗಿಲ್‍ನಲ್ಲಿ ಹುತಾತ್ಮರಾದ ಯೋಧರಿಗೆ ಹಣತೆ ಉರಿಸಿ, ಪುμÁ್ಪರ್ಚನೆಯನ್ನು ಮಾಡಿ, ನುಡಿ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಗಡಿ ಭದ್ರತಾ ಪಡೆಯಲ್ಲಿ ಸುಧೀರ್ಘ 35 ವರ್ಷಗಳ ಕಾಲ ಸೇವೆ ಸಲ್ಲಿಸಿದ ನಿವೃತ್ತ ಯೋಧ ಶ್ರೀ ಸುಂದರ ಗೌಡ ಶೆಟ್ಲ ಬೈಲು ಇವರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ವಿದ್ಯಾರ್ಥಿ ಸಾರ್ಥಕ್ 9ನೇ ತರಗತಿ ಕಾರ್ಗಿಲ್ ವಿಜಯ ದಿವಸದ ಕುರಿತಾಗಿ ಮಾತಾನಾಡಿದರು. ಈ ಸಂದರ್ಭದಲ್ಲಿ ವಿದ್ಯಾಭಾರತಿ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿಜೇತರಾದವರನ್ನು ಆಭಿನಂದಿಸಲಾಯಿತು. ವೇದಿಕೆಯಲ್ಲಿ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕರಾದ ಶ್ರೀ ಅಜಿತ್ ರೈ ಆರ್ತಿಲ, ಆಂಗ್ಲ ಮಾಧ್ಯಮ ವಿಭಾಗದ ಮುಖ್ಯ ಶಿಕ್ಷಕ ಶ್ರೀ ವಸಂತ.ಕೆ. ಪ್ರೌಢ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಶೈಲಶ್ರೀ ರೈ.ಎಸ್. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಯಕ್ಷಿತ್ 9ನೇ ತರಗತಿ ಸ್ವಾಗತಿಸಿ, ತನ್ವಿ 5ನೇ ತರಗತಿ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಲಕ್ಷ್ಮೀಶ ಗೌಡ ಆರಿಗ ವಿಜೇತರ ಪಟ್ಟಿಯನ್ನು ವಾಚಿಸಿದರು. ಶಿಕ್ಷಕಿ ಶ್ರೀಮತಿ ಸೌಮ್ಯ.ಕೆ.ಎ ಅತಿಥಿಗಳ ಪರಿಚಯವನ್ನು ಮಾಡಿ, ಕುಮಾರಿ ಹರಿಪ್ರಿಯಾ ಹರಿದಾಸ್ ಕಾರ್ಯಕ್ರಮ ನಿರೂಪಿಸಿದರು.
