ಪುರುಷರ ವಾಲಿಬಾಲ್‍ನಲ್ಲಿ ವಿಟಿಯು ತಂಡಕ್ಕೆ ಆಯ್ಕೆ

Leaf
Leaf

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ತೃತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿ ಅಖಿಲೇಶ್ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಪುರುಷರ ವಾಲಿಬಾಲ್ ತಂಡಕ್ಕೆ ಆಯ್ಕೆಗೊಂಡಿದ್ದಾರೆ.
ಆಂಧ್ರಪ್ರದೇಶÀ ಕಾಕಿನಾಡದ ಜವಾಹರಲಾಲ್ ನೆಹರು ತಾಂತ್ರಿಕ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಡಿಸೆಂಬರ್ 10 ರಿಂದ 14ರ ವರೆಗೆ ನಡೆಯುವ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಪುರುಷರ ವಾಲಿಬಾಲ್ ಚಾಂಪಿಯನ್‍ಶಿಪ್ 2025-26 ರಲ್ಲಿ ಇವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸುತ್ತಾರೆ.
ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Related News

News
06/03/2026

ದೇಶವೇ ಪ್ರಥಮ ಆದ್ಯತೆಯಾಗಿರಲಿ-ಡಾ. ಕಲ್ಲಡ್ಕ ಪ್ರಭಾಕರ ಭಟ್

News and Events
06/03/2026

ವಿವೇಕಾನಂದ ಕಾಲೇಜಿನಲ್ಲಿ “ವಿವೇಕ ಉದ್ಯೋಗ ಮೇಳ”

News
06/03/2026

ವಿವೇಕಾನಂದ ಕಾಲೇಜಿನಲ್ಲಿ ಶಿವಾಜಿ ಜೀವನ ಚರಿತ್ರೆ ವಿಚಾರ ಸಂಕಿರಣ