ಬುದ್ಧಿಯಿಂದ ಬರೆಯುವುದು ಪರೀಕ್ಷೆ, ಹೃದಯದಿಂದ ಬರೆಯುವುದು ಬದುಕು; ಡಾ. ಶ್ರೀಶ ಕುಮಾರ

Leaf
Leaf

ಪುತ್ತೂರು; ವಿವೇಕಾನಂದರು ಬದುಕುವ ಬದುಕಿಸುವ ದಾರಿ ತೋರಿಸಿಕೊಟ್ಟವರು. ಏಕವಚನದ ಕಡೆಯಿಂದ ಬಹುವಚನದ ಕಡೆಗೆ ನಾವು ಸಾಗಬೇಕಿದೆ. ಬುದ್ಧಿಯಿಂದ ಬರೆಯುವುದು ಪರೀಕ್ಷೆ, ಹೃದಯದಿಂದ ಬರೆಯುವುದು ಬದುಕು. ಜಗತ್ತೇ ನನ್ನ ಮನೆ ಎಂದು ಬದುಕಿದಾಗ, ವಸುಧೈವ ಕುಟುಂಬಕಂ ಎನ್ನುವುದು ಸಾಕಾರಗೊಳ್ಳುತ್ತದೆ ಎಂದು ಕಾಲೇಜಿನ ಸಂಸ್ಕøತ ವಿಭಾಗದ ಮುಖ್ಯಸ್ಥ ಡಾ. ಶ್ರೀಶ ಕುಮಾರ ಹೇಳಿದರು.
ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ ವಿವೇಕಾನಂದ ಸಂಶೋಧನಾ ಕೇಂದ್ರ ಮತ್ತು ಐಕ್ಯೂಎಸಿ ಘಟಕದ ಸಂಯೋಜನೆಯಲ್ಲಿ ಜಗತ್ತಿಗೆ ಭಾರತದ ಅಧ್ಯಾತ್ಮಿಕ ಚಿಂತನೆಯನ್ನು ಪರಿಚಯಿಸಿದ ರಾಷ್ಟ್ರ ಸಂತ ಸ್ವಾಮಿ ವಿವೇಕಾನಂದರ ಕುರಿತಾದ ಚಿಂತನೆಗಳ ಉಪನ್ಯಾಸ ಮಾಲಿಕೆಯಲ್ಲಿ ಮಾತನಾಡಿದರು.
ಕಾಲೇಜು ಆಡಳಿತ ಮಂಡಳಿ ಸಂಚಾಲಕ ಮುರಳಿ ಕೃಷ್ಣ ಕೆ.ಎನ್ ಮಾತನಾಡಿ ವಿವೇಕ ಸ್ಮøತಿ ಕಾರ್ಯಕ್ರಮ ಇಲ್ಲಿಯವರೆಗೆ ನಡೆದುಕೊಂಡು ಬಂದಿದೆಯೆಂದರೆ ಅದರಿಂದ ನಾವು ಪಡೆದುಕೊಳ್ಳಬೇಕಾದದ್ದು ಇನ್ನೂ ಇದೆ ಎಂದರ್ಥ. ಅದನ್ನು ಅರ್ಥಮಾಡಿಕೊಂಡು ಮುಂದುವರಿಯಬೇಕು. ವ್ಯಕ್ತಿತ್ವ ವಿಕಾಸಕ್ಕಾಗಿ ಮಾಡುತ್ತಿರುವ ಈ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪೆÇ್ರ. ವಿಷ್ಣು ಗಣಪತಿ ಭಟ್, ಸ್ನಾತಕೋತ್ತರ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಹೆಚ್. ಜಿ. ಶ್ರೀಧರ್, ಭಾರತೀಯ ಸಂಸ್ಕೃತಿ ಮತ್ತು ಲಲಿತ ಕಲೆಗಳ ಅಧ್ಯಯನ ಕೇಂದ್ರದ ಸಂಯೋಜಕಿ ಡಾ. ವಿದ್ಯಾ ಎಸ್. ಉಪಸ್ಥಿತರಿದ್ದರು.
ಸ್ನಾತಕೋತ್ತರ ಪತ್ರಿಕೋದ್ಯಮ ವಿದ್ಯಾರ್ಥಿ ಹರಿಪ್ರಸಾದ್ ಈಶ್ವರಮಂಗಲ ಸ್ವಾಗತಿಸಿ, ಪಂಚಮಿ ಬಾಕಿ¯ಪದವು ನಿರೂಪಿಸಿ, ಸುಲಕ್ಷಣಾ ಶರ್ಮಾ ವಂದಿಸಿದರು. ಅನನ್ಯ ಮತ್ತು ಪೂಜಿತಾ ಪ್ರಾರ್ಥಿಸಿದರು.

Leave a Reply

Your email address will not be published. Required fields are marked *

Related News

Featured image
Events
07/08/2025

ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಕರಾಟೆ ಸ್ಪರ್ಧೆಯಲ್ಲಿ ಪ್ರಾಂತ ಮಟ್ಟಕ್ಕೆ ಆಯ್ಕೆ

News
07/08/2025

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ: ಪೋಷಕರ ಸಭೆ

News
07/08/2025

ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಪುತ್ತೂರು : ಕೋಡ್ ಕ್ರಾಫ್ಟ್ ವಿಜ್ಞಾನ ಮೇಳ