ಲಯನ್ಸ್ ಕ್ಲಬ್ 100 ವರ್ಷಾಚರಣೆ ನಿಮಿತ್ತ ಪರಿಸರ ಸಂರಕ್ಷಣೆ ಕಾರ್ಯಕ್ರಮ 15-07-2015

Leaf
Leaf

ಲಯನ್ಸ್ ಕ್ಲಬ್ ಮತ್ತು ಶ್ರೀರಾಮ ವಿದ್ಯಾಕೇಂದ್ರ ಇದರ ವತಿಯಿಂದ ಪರಿಸರ ಸಂರಕ್ಷಣೆ ಮತ್ತು 1000 ಗಿಡಗಳನ್ನು ನೆಡುವ ಉದ್ದೇಶವನ್ನಿಟ್ಟುಕೊಂಡು ಲಯನ್ಸ್ ಕ್ಲಬ್ 100 ವರ್ಷ ಆಚರಣೆಯ ಹಿನ್ನಲೆಯಲ್ಲಿ ಶ್ರೀರಾಮ ವಿದ್ಯಾಕೇಂದ್ರದ ವಠಾರದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

lions

ವಿದ್ಯಾಕೇಂದ್ರದ ಸಂಚಾಲಕರು ಡಾ| ಪ್ರಭಾಕರ ಭಟ್ ಕಲ್ಲಡ್ಕ ಇವರು ಕದಂಬ ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜೊತೆಗೆ ಪರಿಸರ ಪ್ರೇಮಿ ದಿನೇಶ್ ನಾಯಕ್, ಲಯನ್ಸ್ ಜಿಲ್ಲಾ ಗವರ್ನರ್ ಕವಿತಾ ಎಸ್. ಶಾಸ್ತ್ರಿ, ಮಾಜಿ ಗವರ್ನರ್ ಕೆ.ಸಿ ಪ್ರಭು, ಲಯನ್ಸ್ ಆಶಾ ಸಿ. ಶೆಟ್ಟಿ, ಲಯನ್ಸ್ ಆಶಾ ಹೆಜಮಾಡಿ, ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ, ಮುಖ್ಯ ಕಾರ್ಯನಿರ್ವಾಹಕ ವಸಂತ ಮಾಧವ, ಪದವಿ ಕಾಲೇಜಿನ ಪ್ರಾಂಶುಪಾಲರು ಕೃಷ್ಣಪ್ರಸಾದ್, ಪದವಿ ಪೂರ್ವ ವಿಭಾಗದ ವಸಂತ ಬಲ್ಲಾಳ, ಡಾ| ಕಮಲಾ ಪ್ರಭಾಕರ ಭಟ್, ಉಪನ್ಯಾಸಕ ವೃಂದ ಮತ್ತು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Related News

News
16/06/2025

ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶ

Events
16/06/2025

ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

Uncategorized
16/06/2025

ಕಡಬ ಸರಸ್ವತೀ ಪ್ರೌಢಶಾಲೆಯಲ್ಲಿ ಹಿಂದೂ ಸಾಮ್ರಾಜ್ಯ ದಿನ