
ಯುವಜನತೆ ಸ್ವದೇಶಿ ಚಿಂತನೆಯನ್ನು ಮಾಡಬೇಕು: ಕಿಶೋರ್ ಕುಮಾರ್ ಬೊಟ್ಯಾಡಿ
ಪುತ್ತೂರು. ಮಾ, 23: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಕಲಿತಂತಹ ಶಿಸ್ತು ಹಾಗೂ ಸಂಸ್ಕಾರವು ಸಮಾಜದಲ್ಲಿ ಒಂದು ಒಳ್ಳೆಯ ಪ್ರಜೆಯಾಗಿ ಹೊರಹೊಮ್ಮಲು ಸಹಕಾರಿಯಾಗುತ್ತದೆ. ವಿದ್ಯೆಯನ್ನು ತನ್ನ ಸ್ವಾರ್ಥಕ್ಕಾಗಿ ಬಳಸಿಕೊಳ್ಳದೆ ಒಳ್ಳೆಯ ಕೆಲಸಕ್ಕಾಗಿ ಉಪಯೋಗಿಸಿಕೊಂಡು ಸಮಾಜ ಮುಖಿ ಕೆಲಸ ಮಾಡಬೇಕು ಜೊತೆ ಪ್ರಕೃತಿಯ ನಿಯಮವನ್ನು ಬದುಕಿನಲ್ಲಿ ಅನುಸರಿಸಿಕೊಂಡು ಭ್ರಷ್ಟಾಚಾರವಿಲ್ಲದೇ ಬಾಳಬೇಕು. ಎಂದು ಹಿರಿಯ ವಿದ್ಯಾರ್ಥಿ ಹಾಗೂ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಹೇಳಿದರು.
ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ( ಸ್ವಾಯತ್ತ ) ಇಲ್ಲಿ ನಡೆದ ‘ಸಪ್ತಪರ್ಣೋತ್ಸವ’ ವಿದ್ಯಾರ್ಥಿ ಸಂಘದ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಬೆಂಗಳೂರಿನ ನಿರೂಪಕಿ ಹಾಗೂ ಕನ್ನಡ ಉಪನ್ಯಾಸಕಿ ಅರ್ಚನಾ ಆರ್ಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಓದು ಕೇವಲ ಅಂಕಗಳಿಗೆ ಮೀಸಲಾಗದೆ ನಮ್ಮ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗಬೇಕು. ಹಾಗೆಯೇ ವಿದ್ಯಾರ್ಥಿಗಳು ಕಾಲೇಜು ಹಿರಿಯರು ಹಾಕಿಕೊಟ್ಟ ಆದರ್ಶವನ್ನು ಪಾಲಿಸಬೇಕು. ನಮ್ಮ ಹಿರಿಯರೇ ನಮಗೆ ಆದರ್ಶ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಮಾತನಾಡಿ, ನಮ್ಮ ದೇಶದ ಅಭಿವೃದ್ಧಿ ನಿಂತಿರುವುದು ಶಿಕ್ಷಣದಲ್ಲಿ. ಹಾಗಾಗಿ ಶಿಕ್ಷಣ ಕ್ಷೇತ್ರದಲ್ಲಿ ಎಲ್ಲರೂ ಸಾಧನೆಗೈಯ ಬೇಕು ಎಂದು ಶುಭಹಾರೈಸಿದರು.
ಕಾಲೇಜಿನ ಸಂಚಾಲಕ ಮುರಳಿಕೃಷ್ಣ ಕೆ. ಎನ್ ಅಭಿನಂದನಾ ನುಡಿಗಳನ್ನಾಡಿದರು.
ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಪೆÇ್ರ. ವಿಷ್ಣುಗಣಪತಿ ಭಟ್, ಪರಿಕ್ಷಾಂಗ ಕುಲಸಚಿವ ಡಾ. ಶ್ರೀಧರ್ ಎಚ್. ಜಿ, ಇತಿಹಾಸ ವಿಭಾಗದ ಮುಖ್ಯಸ್ಥ ಹಾಗೂ ಕಾಲೇಜಿನ ವಿಶೇಷ ಅಧಿಕಾರಿ ಡಾ. ಶ್ರೀಧರ್ ನಾಯ್ಕ್, ಐಕ್ಯೂಎಸಿ ಸಂಯೋಜಕಿ ಹಾಗೂ ವಾಣಿಜ್ಯ ವಿಭಾಗದ ಡೀನ್ ಡಾ. ರವಿಕಲಾ, ಸಹಾಯಕ ಪರಿಕ್ಷಾಂಗ ಕುಲಸಚಿವ ಹಾಗೂ ಸಸ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥ ಪೆÇ್ರ. ಶ್ರೀಕೃಷ್ಣ ಗಣರಾಜ್ ಭಟ್ ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿ ಸಂಘದ ನಾಯಕ ಆಶಿಶ್ ಆಳ್ವ ಸ್ವಾಗತಿಸಿ, ಜತೆ ಕಾರ್ಯದರ್ಶಿ ಪೃಥ್ವಿ ಆಳ್ವ ವಂದಿಸಿ, ನವೀನ್ ಕೃಷ್ಣ, ಅವನಿ. ಕೆ ಮತ್ತು ಮಾನಸ ನಿರ್ವಹಿಸಿದರು.
ಕಾಲೇಜಿನ ವಾರ್ಷಿಕ ವರದಿಯನ್ನು ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ನಿಖಿಲ್ ಕುಮಾರ್ ಕೆ. ಪಿ ಮಂಡಿಸಿದರು. ಕಾಲೇಜು ವಾರ್ಷಿಕೋತ್ಸವದ ಪ್ರಯುಕ್ತ ನಡೆಸಿದ ಸ್ಪರ್ಧೆ ಹಾಗೂ ಕ್ರೀಡಾಕೂಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಶೈಕ್ಷಣಿಕ ವರ್ಷದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ದತ್ತಿನಿಧಿಯನ್ನು ನೀಡಲಾಯಿತು. ಮಧ್ಯಾಹ್ನನದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮವು ನಡೆಯಿತು.
