ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿ.ಜಿ.ಭಟ್ ನಿವೃತ್ತಿ

Leaf
Leaf

ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ (ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ ಪ್ರೊ.ವಿಷ್ಣು ಗಣಪತಿ ಭಟ್ ಮೇ 31, 2025ರಂದು ಸೇವೆಯಿಂದ ನಿವೃತ್ತಿಗೊಳ್ಳುತ್ತಿದ್ದಾರೆ. ಇವರು ಮೂಲತಃ ಹೊನ್ನಾವರ ತಾಲೂಕಿನ ಕರ್ಕಿ ಗ್ರಾಮದವರಾಗಿದ್ದು ಗಣಪತಿ ಪರಮೇಶ್ವರ ಭಟ್ಟ ಹಾಗೂ ಪಾರ್ವತಿ ಇವರ ಪುತ್ರ. ಇವರು ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಕರ್ಕಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಿಕ್ಷಣ ಶ್ರೀ ಚನ್ನಕೇಶವ ಹೈಸ್ಕೂಲ್ ಇಲ್ಲಿ ಮುಗಿಸಿ ಹೊನ್ನಾವರ ಎಸ್ ಡಿ ಎಮ್ ಕಾಲೇಜ್ ಇಲ್ಲಿ ಪದವಿ ಪೂರ್ವ ಶಿಕ್ಷಣವನ್ನು ವಿಜ್ಞಾನ ವಿಭಾಗದಲ್ಲಿ ನಿರ್ವಹಿಸಿ ನಂತರ ಪದವಿ ಶಿಕ್ಷಣವನ್ನು ಉಜಿರೆ ಎಸ್ ಡಿ ಎಮ್ ಕಾಲೇಜ್ ಅಲ್ಲಿ ಕಲಿತು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಂಖ್ಯಾಶಾಸ್ತ್ರ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುತ್ತಾರೆ. ಜೊತೆಗೆ 1997 ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಿಂದ ಎಂಫಿಲ್ ಪದವಿಯನ್ನು ಕೂಡ ಪಡೆದಿದ್ದಾರೆ
ನಂತರ 1988 ರಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಉಪನ್ಯಾಸಕ ಹುದ್ದೆಗೆ ಸೇರಿಕೊಂಡು ತದನಂತರ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಸಂಖ್ಯಾ ಶಾಸ್ತ್ರ ಉಪನ್ಯಾಸಕ್ಕಾಗಿ ಸೇವೆಯನ್ನು ಪ್ರಾರಂಭಿಸಿ ವಿಭಾಗದಲ್ಲಿ ಉಪನ್ಯಾಸಕರಾಗಿ, ವಿಭಾಗ ಮುಖ್ಯಸ್ಥರಾಗಿ ಸೇವೆಯನ್ನು ಸಲ್ಲಿಸಿದ್ದಲ್ಲದೆ 2001ರಿಂದ2011ರ ವರೆಗೆ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ಸೇವೆಯಲ್ಲಿ ನಿರ್ವಹಿಸಿರುತ್ತಾರೆ. ನಂತರ ಸರ್ಕಾರಿ ಆದೇಶದಂತೆ 2011 ರಿಂದ 2020 ರ ತನಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿ ಇಲ್ಲಿಯ ಸ್ನಾತಕೋತ್ತರ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿ ಸೇವೆ ನಿರ್ವಹಿಸಿರುತ್ತಾರೆ. ನಂತರ 5ವರ್ಷಗಳ ಕಾಲ ವಿವೇಕಾನಂದ ಪದವಿ ಕಾಲೇಜಿನ ಪ್ರಾಚಾರ್ಯರಾಗಿ ಕೆಲಸವನ್ನು ನಿರ್ವಹಿಸಿ ಇಂದು ಸೇವೆಯಿಂದ ನಿವೃತ್ತಿಗೊಳ್ಳುತ್ತಿದ್ದಾರೆ.
ನಾಟಕ, ಕ್ರೀಡೆ ಇತ್ಯಾದಿಗಳಲ್ಲಿ ಆಸಕ್ತಿ ಹೊಂದಿರುವ ಇವರು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ರಾಷ್ಟ್ರೀಯ ಸೇನಾದಳ ಮತ್ತು ರಾಷ್ಟ್ರೀಯ ಸೇವಾ ದಳ ಇವುಗಳಲ್ಲಿ ತೊಡಗಿಕೊಂಡು ವಿದ್ಯಾರ್ಥಿಗಳಿಗೆ ಕೂಡ ಮಾರ್ಗದರ್ಶನ ಮಾಡಿದ್ದಾರೆ ಮತ್ತು ಯಕ್ಷಗಾನದ ಅಭಿರುಚಿಯನ್ನು ಹೊಂದಿರುವ ಇವರು ಕಾಲೇಜಿನ ಯಕ್ಷರಂಜಿನಿ ತಂಡದಲ್ಲೂ ಕಾರ್ಯವನ್ನು ನಿರ್ವಹಿಸಿರುತ್ತಾರೆ. ಅಲ್ಲದೆ ಪುತ್ತೂರಿನ ಹಲವಾರು ಸಂಘ ಸಂಸ್ಥೆಗಳಲ್ಲಿ ಬೇರೆ ಬೇರೆ ಜವಾಬ್ದಾರಿಗಳನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಪ್ರಸ್ತುತ ಕಬಕ ಗ್ರಾಮದ ಮುರ ಎಂಬಲ್ಲಿ ಪತ್ನಿ ಲಕ್ಷ್ಮಿ ವಿಜಿ ಭಟ್ ಹಾಗೂ ಪುತ್ರರಾದ ಪ್ರಣವ ಹಾಗೂ ಚಿರಂತನರೊಂದಿಗೆ ನೆಲೆಸಿರುತ್ತಾರೆ.

Leave a Reply

Your email address will not be published. Required fields are marked *

Related News

Events
03/07/2025

ಸರಸ್ವತೀ ವಿದ್ಯಾಲಯದಲ್ಲಿ ಪ್ರತಿಜ್ಞಾವಿಧಿ ಬೋಧನಾ ಕಾರ್ಯಕ್ರಮ

News
03/07/2025

ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಉರಿಮಜಲು ಕೆ. ರಾಮ ಭಟ್ ಸಭಾಂಗಣ ಲೋಕಾರ್ಪಣೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಪ್ರಾರಂಭೋತ್ಸವ

News
02/07/2025

ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 7 ರ್ಯಾಂಕ್ ಪಡೆದು ದಾಖಲೆ