ವಿವೇಕಾನಂದ ಕ್ಯಾಂಪಸ್‌ನಲ್ಲಿ ಬೃಹತ್ ಉದ್ಯೋಗಮೇಳಕ್ಕೆ ಸಿದ್ಧತೆ

Leaf
Leaf

ಮುನ್ನೂರಕ್ಕೂ ಅಧಿಕ ಕಂಪೆನಿಗಳ ಸಂಪರ್ಕ ; ನೋಂದಾವಣೆ ಆರಂಭ

ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘವು ಇದೇ ಪ್ರಥಮ ಬಾರಿಗೆ ನೆಹರು ನಗರದ ತನ್ನ ವಿಶಾಲ ಕ್ಯಾಂಪಸ್‌ನಲ್ಲಿ ಉದ್ಯೋಗ ಮೇಳವೊಂದನ್ನು ಆಯೋಜಿಸುತ್ತಿದೆ. ಗ್ರಾಮೀಣ ಪ್ರದೇಶದ ಯುವ ಸಮೂಹ ಎದುರಿಸುತ್ತಿರುವ ನಿರುದ್ಯೋಗದ ಸಮಸ್ಯೆಯನ್ನು ಲಕ್ಷದಲ್ಲಿರಿಸಿ ಈ ಉದ್ಯೋಗ ಮೇಳವನ್ನು ರೂಪಿಸಲಾಗಿದೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಮೂಲ ಆಶಯವಾದ ಗ್ರಾಮಾಭಿವೃದ್ಧಿಯ ಕನಸು ಈ ಉದ್ಯೋಗಮೇಳದ ಆಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈಗಾಗಲೇ ಈ ಶಿಕ್ಷಣ ಕೇಂದ್ರ ವಿವಿಧ ಗ್ರಾಮಗಳನ್ನು ದತ್ತು ತೆಗೆದುಕೊಂಡು ಅಲ್ಲಿನ ಸಮಗ್ರ ಅಭ್ಯುದಯಕ್ಕೆ ಪಣ ತೊಟ್ಟು ಕಾರ್ಯಪ್ರವೃತ್ತವಾಗಿದೆ. ಅದರ ಮುಂದುವರೆದ ಭಾಗವಾಗಿ, ಉದ್ಯೋಗ ಕ್ಷೇತ್ರದ ಬಗೆಗೆ ಸರಿಯಾದ ಮಾಹಿತಿ, ಜ್ಞಾನ ದೊರಕದೆ ಉದ್ಯೋಗಹೀನರಾಗಿ ಗ್ರಾಮಗಳಲ್ಲುಳಿದ ಯುವ ಸಮೂಹವನ್ನು ಗಮನದಲ್ಲಿರಿಸಿ ಈ ಮೇಳ ಆಯೋಜಿತವಾಗಿದೆ.

3

4

1

2

2017 ರ ಜನವರಿ 13 ರಂದು ಈ ಉದ್ಯೋಗಮೇಳ ಆಯೋಜನೆಗೊಳ್ಳುತ್ತಿದ್ದು, ಸುಮಾರು ಮುನ್ನೂರಕ್ಕೂ ಅಧಿಕ ಕಂಪೆನಿಗಳನ್ನು ಸಂಪರ್ಕಿಸಲಾಗಿದೆ. ರಾಜ್ಯ ಹಾಗೂ ಹೊರರಾಜ್ಯದ ಅನೇಕ ಸಂಸ್ಥೆಗಳು ಈ ಉದ್ಯೋಗಮೇಳದಲ್ಲಿ ಭಾಗವಹಿಸಿ ಈ ಭಾಗದ ಯುವಕ ಯುವತಿಯರಿಗೆ ಉದ್ಯೋಗ ಕೊಡುವುದಕ್ಕೆ ಉತ್ಸಾಹ ತೋರಿವೆ. ಮಾಹಿತಿ ತಂತ್ರಜ್ಞಾನ, ರಿಯಲ್ ಎಸ್ಟೇಟ್, ಬ್ಯಾಂಕಿಂಗ್, ರಿಟೇಲ್ ಕ್ಷೇತ್ರದ ಉದ್ಯಮ, ಉತ್ಪಾದನಘಟಕಗಳೇ ಮೊದಲಾದ ಅನೇಕ ಉದ್ಯಮಗಳು ಈ ಉದ್ಯೋಗಮೇಳದಲ್ಲಿ ಭಾಗವಹಿಸಲಿವೆ.

ಯಾರು ಭಾಗವಹಿಸಬಹುದು?
ಪ್ರಾಥಮಿಕ, ಪ್ರೌಢಶಾಲಾ ಮಟ್ಟದಿಂದ ತೊಡಗಿ ಪಾರಂಪರಿಕ ಪದವಿಗಳಾದ ಬಿ.ಎ, ಬಿ.ಎಸ್ಸಿ, ಬಿ.ಕಾಂ ಮುಂತಾದ ಪದವೀಧರರು, ಐಟಿಐ, ಡಿಪ್ಲಮೋದಂತಹ ವಿಷಯ ವೃತ್ತಿ ಶಿಕ್ಷಣ ಪಡೆದವರು, ಇಂಜಿನಿಯರಿಂಗ್, ಎಂ.ಬಿ.ಎ ಮೊದಲಾದ ವೃತ್ತಿಪರ ಶಿಕ್ಷಣ ಹೊಂದಿದವರು, ಹೀಗೆ ಇನ್ನೂ ಹಲವಾರು ವಿಷಯಗಳಲ್ಲಿ ಪ್ರಶಿಕ್ಷಿತರೂ ಈ ಉದ್ಯೋಗಮೇಳದಲ್ಲಿ ಭಾಗವಹಿಸಬಹುದು. ರಾಜ್ಯದ ಯಾವುದೇ ಭಾಗದ ಉದ್ಯೋಗಾರ್ಥಿಗಳು ಈ ಮೇಳದಲ್ಲಿ ಭಾಗವಹಿಸಬಹುದು.

ಏನು ಮಾಡಬೇಕು?
ಈಗಾಗಲೇ ಈ ಉದ್ಯೋಗ ಮೇಳದ ಹಿನ್ನಲೆಯಲ್ಲಿ ವೆಬ್­ಸೈಟ್ ಒಂದನ್ನು ರೂಪಿಸಲಾಗಿದೆ. ಆ ವೆಬ್ ಸೈಟ್‌ನಲ್ಲಿರುವ ಅರ್ಜಿಯನ್ನು ತುಂಬಿ ಭಾಗವಹಿಸುವ ಉಮೇದುಗಾರಿಕೆಯನ್ನು ನೋಂದಾವಣೆ ಮಾಡಬೇಕು. ವೆಬ್­ಸೈಟ್ ವಿಳಾಸ: www.vivekaudyoga.com ವೆಬ್‌ಸೈಟ್‌ನಲ್ಲಿ ದಾಖಲೆ ಮಾಡಲು ಸಾಧ್ಯವಾಗದವರು ನೆಹರುನಗರದ ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಕೇಂದ್ರದಲ್ಲಿ ರೂಪಿಸಲಾಗಿರುವ ಉದ್ಯೋಗ ಮೇಳದ ಮಾಹಿತಿ ಕೇಂದ್ರಕ್ಕೆ ನೇರವಾಗಿ ಆಗಮಿಸಿ ಅಥವಾ 810565044 ಈ ಸಂಖ್ಯೆಗೆ ಕರೆ ಮಾಡಿ ಹೆಸರು ನೋಂದಾವಣೆ ಮಾಡಿಕೊಳ್ಳಬಹುದು. ತಮ್ಮ ಹೆಸರನ್ನು ದಾಖಲೆ ಮಾಡಿಕೊಂಡವರಿಗೆ ಕೆಲವು ದಿನಗಳ ಅನಂತರ ಉದ್ಯೋಗ ಮೇಳಕ್ಕೆ ಆಗಮಿಸುವಾಗಿನ ಸಿದ್ಧತೆಯ ಬಗೆಗೆ ಸೂಕ್ತ ಮಾಹಿತಿ ನೀಡಲಾಗುತ್ತದೆ. ಈ ಮಾಹಿತಿ ಕೇಂದ್ರ ಬೆಳಗ್ಗೆ  9 ರಿಂದ ಸಂಜೆ 5 ರವರೆಗೆ ತೆರೆದಿರುತ್ತದೆ ಎಂದು ಉದ್ಯೋಗ ಮೇಳ ಸಮಿತಿಯ ಅಧ್ಯಕ್ಷ ಎಸ್.ಆರ್.ರಂಗಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ  ಅಖಿಲ ಭಾರತ ಸಹ ಬೌದ್ಧಿಕ್ ಪ್ರಮುಖ್ ಆಗಿರುವ ಶ್ರೀ ಮುಕುಂದ ಅವರು ನವೆಂಬರ್ 11 ರಂದು  www.vivekaudyoga.com ವೆಬ್­ಸೈಟ್­ನ್ನು ಅನಾವರಣಗೊಳಿಸಿದರು. ಈ ಸಂದರ್ಭ ಕಾಲೇಜಿನ ಗಣ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Related News

Featured image
Events
07/08/2025

ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಕರಾಟೆ ಸ್ಪರ್ಧೆಯಲ್ಲಿ ಪ್ರಾಂತ ಮಟ್ಟಕ್ಕೆ ಆಯ್ಕೆ

News
07/08/2025

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ: ಪೋಷಕರ ಸಭೆ

News
07/08/2025

ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಪುತ್ತೂರು : ಕೋಡ್ ಕ್ರಾಫ್ಟ್ ವಿಜ್ಞಾನ ಮೇಳ