ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಲಾ ಸಂಘದ ಸಮಾರೋಪ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಲಾ ಸಂಘದ ಸಮಾರೋಪ
Leaf
Leaf

ವಿದ್ಯಾಭ್ಯಾಸದ ಹಂತದಲ್ಲಿ ಬೇರೆ ಬೇರೆ ಚಟುವಟಿಕೆಗಳಲ್ಲಿ ನಾವು ಹೇಗೆ ತೊಡಗಿಸಿಕೊಂಡಿದ್ದೇವೆ ಎಂಬುದರ ಆಧಾರದ ಮೇಲೆ ನಮ್ಮ ಭವಿಷ್ಯದ ದಿನಗಳು ನಿಂತಿರುತ್ತವೆ ಎಂದು ವಿವೇಕಾನಂದ ಮಹಾವಿದ್ಯಾಲಯದ ವ್ಯವಹಾರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಅನ್ನಪೂರ್ಣ ಪಿ.ಜಿ ಹೇಳಿದರು.

ಅವರು ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ನಡೆದ ಕಲಾಸಂಘದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ನಿರ್ದೇಶಕ ಡಾ. ಕೆ ಎನ್ ಸುಬ್ರಹ್ಮಣ್ಯ ಅವರು ಮಾತನಾಡುತ್ತಾ, ಇಂದಿನ ಕಾಲಘಟ್ಟದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧೆಗಳು ಇರುವುದು ಸಹಜ. ವಿದ್ಯಾರ್ಥಿಗಳು ಕೇವಲ ಪಠ್ಯ ಪುಸ್ತಕಕ್ಕೆ ಮಾತ್ರ ಸೀಮಿತರಾಗದೆ, ಪತ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಲ್ಲಿ ಮಂದಿನ ದಿನಗಳಲ್ಲಿ ಸಾಕಷ್ಟು ಅವಕಾಶಗಳು ಲಭ್ಯವಾಗಬಲ್ಲದು ಎಂದು ತಿಳಿಸಿದರು. ವೇದಿಕೆಯಲ್ಲಿ ಕಲಾಸಂಘದ ಸಂಯೋಜಕರಾದಮೋನಿಷ ಎನ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕಲಾಸಂಘದವತಿಯಿಂದ ನಡೆಸಲ್ಪಟ್ಟ ವಿವಿಧಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ, ಉಪಪ್ರಾಂಶುಪಾಲ ದೇವಿಚರಣ್ ರೈ, ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಹಾಗೂ ಕಲಾ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ರೂಪ ಶ್ರೀ ಸ್ವಾಗತಿಸಿ, ಯುಕ್ತ ವಂದಿಸಿದರು. ವಿದ್ಯಾರ್ಥಿನಿ ವರ್ಷಾ ನಿರೂಪಿಸಿದರು.

Leave a Reply

Your email address will not be published. Required fields are marked *

Related News

Featured image
Events
07/08/2025

ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಕರಾಟೆ ಸ್ಪರ್ಧೆಯಲ್ಲಿ ಪ್ರಾಂತ ಮಟ್ಟಕ್ಕೆ ಆಯ್ಕೆ

News
07/08/2025

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ: ಪೋಷಕರ ಸಭೆ

News
07/08/2025

ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಪುತ್ತೂರು : ಕೋಡ್ ಕ್ರಾಫ್ಟ್ ವಿಜ್ಞಾನ ಮೇಳ