ವಿವೇಕಾನಂದ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಉತ್ತಮಪ್ಲೇಸ್ಮೆಂಟ್: 100ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ವಿವಿಧ ಕಂಪನಿಗಳಲ್ಲಿ ಉದ್ಯೋಗಕ್ಕೆ ಸೇರ್ಪಡೆ

Leaf
Leaf

ಪುತ್ತೂರಿನ ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ 2024- 25 ನೇ ಸಾಲಿನ ಶೈಕ್ಷಣಿಕ ಸಾಲಿನಲ್ಲಿ ಆಟೋಮೊಬೈಲ್, ಮೆಕ್ಯಾನಿಕಲ್,ಸಿವಿಲ್, ಕಂಪ್ಯೂಟರ್ ಸೈನ್ಸ್ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದಲ್ಲಿ ಪ್ಲೇಸ್ಮೆಂಟ್ ಕ್ಷೇತ್ರದಲ್ಲಿ ಭರ್ಜರಿ ಸಾಧನೆ ಮಾಡಿದೆ. ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿಷ್ಠಿತ ಕಂಪನಿಗಳಾದ TOYOTA United,Bosch limited ,Forvia,Aarbee structure,TPO group,Toyota kirloskar motar ,mandovi motors ಇತ್ಯಾದಿಗಳಲ್ಲಿ ಉದ್ಯೋಗಕ್ಕೆ ಆಯ್ಕೆಯಾಗಿದ್ದಾರೆ. ಪ್ಲೇಸ್ಮೆಂಟ್ ಆಯ್ಕೆಯಾದ ವಿದ್ಯಾರ್ಥಿಗಳು ಕಂಪನಿ ಗಳಿಂದ ಮೆಚ್ಚುಗೆ ಪಡೆದು ತಮ್ಮ ತರಬೇತಿ ಗುಣಮಟ್ಟವನ್ನು ಪ್ರತಿಬಿಂಬಿಸಿದ್ದಾರೆ. ಈ ಕಾಲೇಜಿನ ವಿಶೇಷತೆಗಳೇನೆಂದರೆ,
1) ತಂತ್ರಜ್ಞಾನ ಆಧಾರಿತ ತರಬೇತಿ
2) ಸಾಫ್ಟ್ ಸ್ಕಿಲ್ಸ್ ಮತ್ತು ಇಂಟರ್ವ್ಯೂ ಪೂರ್ವ ತಯಾರಿ
3) ನೇರವಾಗಿ ಕಂಪೆನಿಗಳ ಭೇಟಿ ಮತ್ತು ಆನ್ ಕ್ಯಾಂಪಸ್ ಪ್ಲೇಸ್ಮೆಂಟ್
ಕಾಲೇಜಿನ ಪ್ರಾಂಶುಪಾಲರಾದ ಮುರಳೀಧರ್ ಎಸ್ ಮಾತನಾಡುತ್ತಾ “ಇದು ನಮ್ಮ ಕಾಲೇಜಿನ ಶ್ರೇಷ್ಠ ಸಾಧನೆ. ವಿದ್ಯಾರ್ಥಿಗಳ ಶ್ರಮ ಹಾಗೂ ಪ್ಲೇಸ್ಮೆಂಟ್ ತಂಡದ ಸಹಕಾರದಿಂದ ಈ ಯಶಸ್ಸು ಸಾಧ್ಯವಾಯಿತು. ಉತ್ತಮ ಕಂಪೆನಿಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ತಿಳಿಸಿದರು.

Leave a Reply

Your email address will not be published. Required fields are marked *

Related News

Featured image
Events
07/08/2025

ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಕರಾಟೆ ಸ್ಪರ್ಧೆಯಲ್ಲಿ ಪ್ರಾಂತ ಮಟ್ಟಕ್ಕೆ ಆಯ್ಕೆ

News
07/08/2025

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ: ಪೋಷಕರ ಸಭೆ

News
07/08/2025

ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಪುತ್ತೂರು : ಕೋಡ್ ಕ್ರಾಫ್ಟ್ ವಿಜ್ಞಾನ ಮೇಳ