
ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಎಲೆಕ್ಟ್ರಾನಿಕ್ಸ್ ಹಾಗೂ ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿಗಳಿಗೆ ಕಂಪನಿಗಳಲ್ಲಿ “ಸರ್ವಿಸ್ ಇಂಜಿನಿಯರ್” ಗಳ ಪಾತ್ರ ಹಾಗೂ ಅವಶ್ಯಕತೆಗಳ ಬಗ್ಗೆ ಕಾಲೇಜಿನ ಹಿರಿಯ ವಿದ್ಯಾರ್ಥಿ ವಿಲಾಸ್ ಕಾದಿಲ್ಕರ್ ಅಸಿಸ್ಟೆಂಟ್ ಮ್ಯಾನೇಜರ್, ಇಶಿದ ಇಂಡಿಯಾ ಪ್ರೈವೇಟ್ ಲಿಮಿಟೆಡ್” ಮಾಹಿತಿ ಕಾರ್ಯಗಾರ ನಡೆಸಿಕೊಟ್ಟರು. ಇವರು ವಿದ್ಯಾರ್ಥಿಗಳೊಂದಿಗೆ ಸಂವಹನ ಮಾಡುತ್ತಾ ಪ್ರಸ್ತುತ ಕಂಪನಿಗಳಲ್ಲಿ ಸರ್ವಿಸ್ ಇಂಜಿನಿಯರ್ ಗಳ ಅವಶ್ಯಕತೆ ಅವರ ಕಾರ್ಯ ಪ್ರವೃತ್ತಿಯ ಬಗ್ಗೆ ವಿಷದವಾಗಿ ತಿಳಿಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕವೃಂದದವರು ಭಾಗವಹಿಸಿದರು.