ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಶ್ರೀ ಭಾರತೀ ವಿದ್ಯಾಸಂಸ್ಥೆ ಆಲಂಕಾರು ಇಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನಮ್ಮ ಸಂಸ್ಥೆಯ 17ರ ವಯೋಮಾನದ ಬಾಲಕರ ವಿಭಾಗದಲ್ಲಿ ಚಿಂತನ್ .ಕೆ. 10ನೇ ತರಗತಿ ಮತ್ತು ಬಾಲಕಿಯರ ವಿಭಾಗದಲ್ಲಿ ಡ್ಯಾಲಿ ಹತ್ತನೇ ತರಗತಿ ಪ್ರಥಮ ಸ್ಥಾನವನ್ನು ಪಡೆದು ಮುಂದೆ ಸೆಪ್ಟಂಬರ್ ತಿಂಗಳಲ್ಲಿ ಬೆಳಗಾಂನಲ್ಲಿ ನಡೆಯಲಿರುವ ಪ್ರಾಂತ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇದೇ ವಯೋಮಾನದ ಕೀರ್ತನ್‍ಕುಮಾರ್ ಪಿ 10ನೇ ತರಗತಿ ದ್ವಿತೀಯ ಸ್ಥಾನ, ಲೋಹಿತ್‍ಕುಮಾರ್ 9ನೇ ತರಗತಿ ಹಾಗೂ ಬಾಲಕಿಯರ ವಿಭಾಗದಲ್ಲಿ ಕೀರ್ತಿ ಜೆ.ರೈ 9ನೇ ತರಗತಿ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಇವರಿಗೆ ಕರಾಟೆ ಶಿಕ್ಷಕರಾದ ಶ್ರೀ ಯಾದವ ಬೀರಂತಡ್ಕ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಲಕ್ಷ್ಮೀಶ ಗೌಡ ಆರಿಗ ತರಬೇತಿ ನೀಡಿರುತ್ತಾರೆ.

