ಇಸ್ರೋ ಸ್ವಯಂಚಾಲಿತ ಹವಾಮಾನ ವೀಕ್ಷಣಾ ಕೇಂದ್ರ ಲೋಕಾರ್ಪಣೆ

ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಸ್ಥಾಪಿಸಿದ ಹವಾಮಾನ ವೀಕ್ಷಣಾ ಘಟಕದ ಉದ್ಘಾಟನಾ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ಜರಗಿತು. ಘಟಕವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಮಂಗಳೂರು ಆಕಾಶವಾಣಿ ಕೇಂದ್ರದ ನಿರ್ದೇಶಕ ಡಾ.ವಸಂತ ಕುಮಾರ್ ಪೆರ್ಲ ಇಸ್ರೋದ ಈ ಕೊಡುಗೆ ಅತ್ಯಂತ ಉಪಕಾರಿಯಾಗಿದ್ದು, ಇದನ್ನು ಇಂಜಿನಿಯರಿಂಗ್ ಕಾಲೇಜಿನಂತಹ ಶಿಕ್ಷಣ ಸಂಸ್ಥೆಗಳು ಪರಿಣಾಮಕಾರಿಯಾಗಿ ಬಳಸಿಕೊಂಡು ಜನಸಾಮಾನ್ಯರಿಗೆ ಮತ್ತು ಸ್ಥಳೀಯ ರೈತಾಪಿ ವರ್ಗಕ್ಕೆ ಇದರ ಪೂರ್ಣ ಪ್ರಯೋಜನವನ್ನು ನೀಡುತ್ತಿರುವ ಬಗ್ಗೆ ಅವರು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಮುಖ್ಯ ಅತಿಥಿಗಳಾಗಿ […]