ರಕ್ಷಾಬಂಧನ

ರಕ್ಷಾಬಂಧನವು ಹಿಂದು ಸಮಾಜದಲ್ಲಿ ಸಾಮರಸ್ಯವನ್ನು ಬೆಳೆಸುತ್ತಾ ಒಗ್ಗಟ್ಟಿನ ಚಿಂತನೆಯೊಂದಿಗೆ ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಮುನ್ನುಡಿಯಾಗಿದೆ. ರಕ್ಷೆಯಲ್ಲಿರುವ ಒಂದೊಂದು ಎಸಳುಗಳಂತೆ ಹಿಂದೂ ಸಮಾಜದ ಎಲ್ಲರನ್ನು ಒಗ್ಗೂಡಿಸಿ ಸದೃಢ ಸಮಾಜವನ್ನು ಕಟ್ಟಲು ಇಂತಹ ದಿನಗಳು ಸಹಾಯಕವಾಗುತ್ತದೆ ಎಂದು ಶ್ರೀರಾಮ ಪದವಿ ಪೂರ್ವ ಕಾಲೇಜಿನ ಗಣಕ ಯಂತ್ರ ವಿಭಾಗದ ಉಪನ್ಯಾಸಕಿ ಶ್ರೀಮತಿ ರಶ್ಮಿ ಹೇಳಿದರು. ಅವರು ಶ್ರೀರಾಮ ಪದವಿ ಕಾಲೇಜಿನ ಪ್ರಣವ ವಿದ್ಯಾರ್ಥಿ ಸಂಘದ ವತಿಯಿಂದ ನಡೆದ ರಕ್ಷಾಬಂಧನ ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದರು. ಈ ಸಂಧರ್ಭದಲ್ಲಿ ವಿದ್ಯಾರ್ಥಿಗಳು – ಉಪನ್ಯಾಸಕ ಮತ್ತು […]

ಓಣಂ ಆಚರಣೆ

ದಿನಾಂಕ 28-08-2015 ರ ಶುಕ್ರವಾರದಂದು ಪದವಿ ವಿಭಾಗದ ಪ್ರಾಂಶುಪಾಲರಾದ ಶ್ರೀ ಕೃಷ್ಣಪ್ರಸಾದ್ ಕಾಯರ್‌ಕಟ್ಟೆ ದೀಪ ಬೆಳಗಿಸುವುದರ ಮೂಲಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಓಣಂ ಕಾರ್ಯಕ್ರಮವನ್ನು ಆಚರಿಸಲಾಯಿತು. ವಿದ್ಯಾಲಯದ ಪ್ರಾಂಶುಪಾಲರು, ಉಪನ್ಯಾಸಕ, ಉಪನ್ಯಾಸಕೇತರ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.