ರಕ್ಷಾಬಂಧನ

ನಿರ್ಮಲ ಪ್ರೇಮ ಭ್ರಾತೃತ್ವದ ಸಂಕೇತ ರಕ್ಷಾಬಂಧನ, ಬಿಡಿಬಿಡಿಯಾದ ರೇಷ್ಮೆಯ ಎಸಳುಗಳನ್ನು ದಾರದಿಂದ ಪೋಣಿಸಿದಾಗ ಅದು ರಕ್ಷೆಯಾಗುತ್ತದೆ. ರಕ್ಷೆಯಲ್ಲಿರುವ ಒಂದೊಂದು ಎಸಳುಗಳಂತೆ ಹಿಂದೂ ಸಮಾಜದ ಎಲ್ಲರನ್ನು ಒಗ್ಗೂಡಿಸಿದಾಗ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದು ಸಮಾಜ ಶಾಸ್ತ್ರ ವಿಭಾಗದ ಉಪನ್ಯಾಸಕ ಶ್ರೀ ರಾಜರಾಮವರ್ಮ ಶ್ರೀರಾಮ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ರಕ್ಷಾಬಂಧನದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಶ್ರೀರಾಮ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು – ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದಕ್ಕೆ, ವಿದ್ಯಾರ್ಥಿ-ವಿದ್ಯಾರ್ಥಿಗಳು ಪರಸ್ಪರ ರಕ್ಷೆಯನ್ನು ಕಟ್ಟಿ ಸಿಹಿ ತಿನ್ನಿಸಿ ರಕ್ಷಾಬಂಧನದ […]

ರಕ್ಷಾಬಂಧನ, ಸಂಸ್ಕೃತೋತ್ಸವ ಕಾರ್ಯಕ್ರಮ

ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತದಲ್ಲಿ ಭಾರತೀಯರೆಲ್ಲರೂ ಸಹೋದರರಂತೆ ಪರಸ್ಪರ ಸಾಮರಸ್ಯದಿಂದ ಜೀವಿಸಿದರೆ ಭಾರತ ಅಭಿವೃದ್ಧಿಯಾಗುವುದು. ರಕ್ಷಾಬಂಧನ ಉತ್ಸವ ಆಚರಿಸುವ ಮೂಲಕ ಜಾತಿ, ಮತ, ಭಾಷೆ ಎಂಬ ಭೇದವಿಲ್ಲದೆ ಎಲ್ಲರೂ ಒಗ್ಗಟ್ಟಿನಿಂದ ಬಾಳುವಂತಾಗಬೇಕು, ಒಳಗಿನ ಭಿನ್ನಮತಗಳನ್ನು ಹೊರಗಿನ ಶತ್ರುಗಳನ್ನು ಏಕತೆಯಿಂದ ಎದುರಿಸಬೇಕೆಂದು ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಪರಮೇಶ್ವರ ಹೆಗ್ಡೆ ಹೇಳಿದರು. ಅವರು ಶ್ರೀರಾಮ ಪ್ರೌಢಶಾಲೆಯಲ್ಲಿ ನಡೆದ ರಕ್ಷಾಬಂಧನ ಮತ್ತು ಸಂಸ್ಕೃತೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಸಂಸ್ಕೃತ ಕಲಿಯುವುದರಿಂದ ಸುಸಂಸ್ಕೃತರಾಗುತ್ತೇವೆ. ಭಾಷೆಯ ಬಳಕೆಯಿಂದ ಭಾಷೆ ಉಳಿಯುತ್ತದೆ. […]