ವಿವೇಕಾನಂದ ಕ್ಯಾಂಪಸ್‌ನಲ್ಲಿ ಬೃಹತ್ ಉದ್ಯೋಗಮೇಳಕ್ಕೆ ಸಿದ್ಧತೆ

ಮುನ್ನೂರಕ್ಕೂ ಅಧಿಕ ಕಂಪೆನಿಗಳ ಸಂಪರ್ಕ ; ನೋಂದಾವಣೆ ಆರಂಭ ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘವು ಇದೇ ಪ್ರಥಮ ಬಾರಿಗೆ ನೆಹರು ನಗರದ ತನ್ನ ವಿಶಾಲ ಕ್ಯಾಂಪಸ್‌ನಲ್ಲಿ ಉದ್ಯೋಗ ಮೇಳವೊಂದನ್ನು ಆಯೋಜಿಸುತ್ತಿದೆ. ಗ್ರಾಮೀಣ ಪ್ರದೇಶದ ಯುವ ಸಮೂಹ ಎದುರಿಸುತ್ತಿರುವ ನಿರುದ್ಯೋಗದ ಸಮಸ್ಯೆಯನ್ನು ಲಕ್ಷದಲ್ಲಿರಿಸಿ ಈ ಉದ್ಯೋಗ ಮೇಳವನ್ನು ರೂಪಿಸಲಾಗಿದೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಮೂಲ ಆಶಯವಾದ ಗ್ರಾಮಾಭಿವೃದ್ಧಿಯ ಕನಸು ಈ ಉದ್ಯೋಗಮೇಳದ ಆಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈಗಾಗಲೇ ಈ ಶಿಕ್ಷಣ ಕೇಂದ್ರ ವಿವಿಧ ಗ್ರಾಮಗಳನ್ನು ದತ್ತು […]