ಗ್ರಾಮ ವಿಕಾಸ ಸಮಾಲೋಚನಾ ಸಭೆ – 2021

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ) ವತಿಯಿಂದ ಶಿಕ್ಷಣ ಸಂಸ್ಥೆಗಳ ಮೂಲಕ ನಡೆಯುತ್ತಿರುವ ಗ್ರಾಮ ವಿಕಾಸ ಚಟುವಟಿಕೆಗಳ ಅವಲೋಕನಾ ಸಭೆ ದಿನಾಂಕ 30 ಅಕ್ಟೋಬರ್ 2021, ಶನಿವಾರದಂದು ವಿವೇಕಾನಂದ ಪದವಿ ಕಾಲೇಜಿನ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ನಡೆಯಿತು. 35 ಗ್ರಾಮಗಳಿಂದ 76 ಗ್ರಾಮಸ್ತರು ಸೇರಿದಂತೆ 137 ಪ್ರತಿನಿಧಿಗಳು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಘದ ಅಧ್ಯಕ್ಷರಾದ ಡಾ| ಪ್ರಭಾಕರ ಭಟ್ ‘ನಮ್ಮ ಗ್ರಾಮಗಳಲ್ಲಿರುವ ಶ್ರೇಷ್ಠವಾದ ಪರಂಪರೆ ಮತ್ತು ಜ್ಞಾನವನ್ನು ಉಳಿಸಿಕೊಳ್ಳಬೇಕಾಗಿದೆ. ಗ್ರಾಮವಿಕಾಸ ಯೋಜನೆಯೆಂಬ ಚಿಂತನೆಯು ಸಮಾಜದ ಅಭಿವೃದ್ಧಿಯಲ್ಲಿ […]