ವೀರಸಾವರ್ಕರ್ ಹೋರಾಟದ ಹಾದಿ ಯುವ ಜನತೆಗೆ ಮಾದರಿಯಾಗಲಿ: ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿಕಸಿತ ಭಾರತ – ವೀರ ಸಾವರ್ಕರ್ ಕಾರ್ಯಕ್ರಮದಲ್ಲಿ ಡಾ. ಕಲ್ಲಡ್ಕ ಪ್ರಭಾಕರ್ ಭಟ್

ಇತಿಹಾಸದ ಪುಟಗಳನ್ನು ತಿರುವಿ ಹಾಕಿದರೆ, ಈ ದೇಶದ ಮೇಲೆ ಸಾಕಷ್ಟು ಪ್ರಹಾರಗಳು ನಡೆದಿರುವುದು ಗೋಚರಿಸುತ್ತದೆ. ಕಳೆದುಕೊಂಡ ಸ್ವಾತಂತ್ರ್ಯವನ್ನು ಪುನರ್ ಸ್ಥಾಪಿಸುವುದಕ್ಕಾಗಿ ಸಾಕಷ್ಟು ಮಂದಿ ವೀರ ಹೋರಾಟಗಾರರು ಈ ನೆಲದಲ್ಲಿ ಜನ್ಮವೆತ್ತಿ ಬಂದಿರುವುದು ತಿಳಿದಿದ್ದೇವೆ. ಅಂತವರಲ್ಲಿ ವೀರ ಸಾವರ್ಕರ್ ಅವರ ಹೋರಾಟ ಅತ್ಯಂತ ಗಮನಾರ್ಹವಾದದು. ಸ್ವಂತಕ್ಕಾಗಿ ಬದುಕನ್ನು ಕಟ್ಟಿಕೊಳ್ಳದೆ, ಸಂಪೂರ್ಣವಾಗಿ ದೇಶಕ್ಕಾಗಿ ಬದುಕಿದವರು ಸಾವರ್ಕರ್. ಬಲವಾದ ಧೈಯ, ಚಿಂತನೆ, ತಾಯಿ ಭಾರತಿಗೋಸ್ಕರ ಬದುಕಬೇಕೆನ್ನುವ ಹಂಬಲ ಸಾವರ್ಕರ್ ಅವರನ್ನು ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಳ್ಳುವಂತೆ ಮಾಡಿತು. ದೇಶದಲ್ಲಿ ಚಾಲ್ತಿಯಲ್ಲಿದ್ದ ವಿದೇಶಿ ವಸ್ತುಗಳನ್ನು […]
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಲಾ ಸಂಘದ ಸಮಾರೋಪ

ವಿದ್ಯಾಭ್ಯಾಸದ ಹಂತದಲ್ಲಿ ಬೇರೆ ಬೇರೆ ಚಟುವಟಿಕೆಗಳಲ್ಲಿ ನಾವು ಹೇಗೆ ತೊಡಗಿಸಿಕೊಂಡಿದ್ದೇವೆ ಎಂಬುದರ ಆಧಾರದ ಮೇಲೆ ನಮ್ಮ ಭವಿಷ್ಯದ ದಿನಗಳು ನಿಂತಿರುತ್ತವೆ ಎಂದು ವಿವೇಕಾನಂದ ಮಹಾವಿದ್ಯಾಲಯದ ವ್ಯವಹಾರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಅನ್ನಪೂರ್ಣ ಪಿ.ಜಿ ಹೇಳಿದರು. ಅವರು ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ನಡೆದ ಕಲಾಸಂಘದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ನಿರ್ದೇಶಕ ಡಾ. ಕೆ ಎನ್ ಸುಬ್ರಹ್ಮಣ್ಯ ಅವರು ಮಾತನಾಡುತ್ತಾ, ಇಂದಿನ ಕಾಲಘಟ್ಟದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ […]
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ವಿಜ್ಞಾನ ವಿಭಾಗದ ಪೋಷಕರ ಸಭೆ

ವಿವೇಕಾನಂದ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ನಡೆಯಿತು. ಪರೀಕ್ಷಾ ಸಮಯ ಸಮೀಪಿಸುತ್ತಿರುವ ಸಂದರ್ಭದಲ್ಲಿ ಹಲವು ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಗೊಂದಲಗಳನ್ನು ಪರಿಹರಿಸಿ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ನಡೆಸಲಾದ ಈ ಸಭೆಯಲ್ಲಿ ಮುಖ್ಯವಾಗಿ ಮುಂಬರುವ ಪೂರ್ವ ಸಿದ್ಧತಾ ಪರೀಕ್ಷೆಗಳು, ಪ್ರಾಯೋಗಿಕ ಪರೀಕ್ಷೆಗಳು ಹಾಗೂ ವಾರ್ಷಿಕ ಪರೀಕ್ಷೆಗಳು ಅದಕ್ಕಾಗಿ ವಿದ್ಯಾರ್ಥಿಗಳು ಮಾಡಬೇಕಾದ ತಯಾರಿಗಳ ಬಗ್ಗೆ ಹಲವು ಮಾಹಿತಿಗಳನ್ನು ಪೋಷಕರಿಗೆ ನೀಡಿದರು. Read more
ನರೇಂದ್ರ ಪ.ಪೂ.ಕಾಲೇಜಿನ ನೂತನ ಸಭಾಂಗಣ ಹಂಸಧ್ವನಿ ಉದ್ಘಾಟನೆ-ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ ಪ್ರತಿಭಾ ಪರ್ವ

ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕ ಪರಂಪರೆಯನ್ನು ಒಳಗೊಂಡ ಆಧುನಿಕ ಶಿಕ್ಷಣ ಸೌಲಭ್ಯವನ್ನು ಒದಗಿಸುವುದು ಈ ಸಂಸ್ಥೆಯ ಉದ್ದೇಶ.ಆಧುನಿಕ ಹಾಗೂ ಸ್ಪರ್ಧಾತ್ಮಕ ಜಗತ್ತಿಗೆ ವಿದ್ಯಾರ್ಥಿಗಳನ್ನು ಅಣಿಗೊಳಿಸಿಕೊಳ್ಳಲು ಶಿಕ್ಷಣ ಕ್ಷೇತ್ರದಲ್ಲಿ ಅಪರಿಮಿತ ಅವಕಾಶಗಳಿದ್ದು ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು.ಸಮಾಜದ ಆಸ್ತಿಗಳಾಗಿ ಹೊರಹೊಮ್ಮಬೇಕಾಗಿದೆ ಎಂದು ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ‍್ಯದರ್ಶಿಗಳಾದ ಡಾ. ಕೆ. ಎಂ. ಕೃಷ್ಣ ಭಟ್ ರವರು ಹೇಳಿದರು. Read more