ವಿವೇಕಾನಂದ ಕಾಲೇಜಿನ ಎನ್‌ಸಿಸಿ ಕೆಡೆಟ್ ಗಳ ಅಗ್ರಮಾನ್ಯ ಸಾಧನೆ ದೆಹಲಿಯ ಆರ್‌ಡಿಸಿ ಪರೇಡ್ ನಲ್ಲಿ ಭಾಗವಹಿದ ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ

ಪುತ್ತೂರು, ಫೆ. ೧೦: ಇಂದು ನಮ್ಮ ಸಂಸ್ಥೆಯ ಮೂವರು ವಿದ್ಯಾರ್ಥಿಗಳು ನಮ್ಮ ಕಾಲೇಜಿನ ಹೆಸರನ್ನು ದೇಶದಾದ್ಯಂತ ಪಸರಿಸಿದ್ದಾರೆ. ಬದುಕಿನ ಈ ಹಂತದಲ್ಲಿ ಆರ್‌ಡಿಸಿ ಪರೇಡ್ ನಲ್ಲಿ ಭಾಗವಹಿಸಿ ಮಹತ್ತರ ಸಾಧನೆಯನ್ನು ಮಾಡಿದ್ದಾರೆ. ಇವರ ಸಾಧನೆ ಮತ್ತಷ್ಟು ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ ಎಂದು ಪುತ್ತೂರಿನ ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ ಹೇಳಿದರು.ಇವರು ಪುತ್ತೂರಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ಇಲ್ಲಿ ಎನ್‌ಸಿಸಿ ಘಟಕ ಮತ್ತು ಐಕ್ಯೂಎಸಿ ಘಟಕದ ಸಹಯೋಗದಲ್ಲಿ ಆಯೋಜಿಸಿದ ದೆಹಲಿಯ ಗಣರಾಜ್ಯೋತ್ಸವ […]