ಕಲ್ಲಡ್ಕ ಶ್ರೀರಾಮ ಶಾಲೆಯಲ್ಲಿ ಕೆಡ್ಡಸ ಹಬ್ಬ

ದಿನಾಂಕ ೧೪.೨.೨೦೨೫ರಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ಕೆಡ್ಡಸ ಹಬ್ಬ ಆಚರಿಸಲಾಯಿತು.ಕಾರ್ಯಕ್ರಮದ ಮೊದಲಿಗೆ ತುಳಸಿಕಟ್ಟೆಯ ಮುಂದೆ ಗೋಮಯದಿಂದ ಶುದ್ಧೀಕರಿಸಿ, ಭೂಮಿ ದೇವಿಯ ಸಾನಿಧ್ಯ ರಚಿಸಿ, ದೀಪಹಚ್ಚಿ, ಮಣೆಯ ಮೇಲೆ ಎಣ್ಣೆ, ಸೀಗೆಕಾಯಿ, ಅರಶಿನ – ಕುಂಕುಮ, ಪಚ್ಚೆ ಹಸಿರಿನ ಹುಡಿ, ವೀಳ್ಯದೆಲೆ ಇತ್ಯಾದಿಗಳನ್ನು ಭೂಮಿ ದೇವಿಯ ಸ್ನಾನಕೋಸ್ಕರ ಇಟ್ಟು ಹುರುಳಿ, ಹೆಸರುಕಾಳು, ಒಣಕೊಬ್ಬರಿ, ಕಡಲೆಕಾಯಿಗಳ ಮಿಶ್ರಣ(ನನ್ನೇರಿ) ಇದರೊಂದಿಗೆ ತುಳುನಾಡಿನ ವಿವಿಧ ಭಕ್ಷö್ಯಗಳನ್ನು ಹಿರಿಯ ತಾಯಂದಿರು ಭೂಮಿಗೆ ಎಣ್ಣೆ ಹಾಲು ಹಾಕಿ ಬಡಿಸಿದರು. ವಿದ್ಯಾರ್ಥಿಗಳು […]