ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶ

ಪುತ್ತೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ 2024-25ನೇ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳÀ ಫಲಿತಾಂಶವು ಪ್ರಕಟಗೊಂಡಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳು 100% ಫಲಿತಾಂಶದೊಂದಿಗೆ ಅಭೂತಪೂರ್ವ ಸಾಧನೆಯನ್ನು ಮಾಡಿದ್ದಾರೆ. ಇದೇ ತಿಂಗಳಿನಲ್ಲಿ ನಡೆದ ಪರೀಕ್ಷೆಗೆ ಕಾಲೇಜಿನಿಂದ ಒಟ್ಟು 372 ವಿದ್ಯಾರ್ಥಿಗಳು ಹಾಜರಾಗಿದ್ದು ಎಲ್ಲಾ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕಾಲೇಜಿನ ವಿಭಾಗವಾರು ಫಲಿತಾಂಶಗಳ ಪೈಕಿ ಕಂಪ್ಯೂಟರ್ ಸೈನ್ಸ್-100%, ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ […]

ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

ಪುತ್ತೂರು: ಜೀವನದಲ್ಲಿ ಪ್ರತಿಯೊಬ್ಬರಿಗೂ ಅವರದ್ದೇ ಆದ ಗುರಿ ಇರುತ್ತದೆ, ಅದನ್ನು ತಲುಪುವಲ್ಲಿ ಅಪಾರವಾದ ಶ್ರದ್ಧೆ ಮತ್ತು ಅವಿರತವಾದ ಶ್ರಮದ ಆವಶ್ಯಕತೆ ಇದೆ ಎಂದು ಎಸ್‍ಎಪಿ ಲ್ಯಾಬ್ ಇಂಡಿಯಾ ಇದರ ಡೆವೆಲಪ್‍ಮೆಂಟ್ ಎಕ್ಸ್‍ಪರ್ಟ್ ಹಾಗೂ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಹಿರಿಯ ವಿದ್ಯಾರ್ಥಿನಿ ನಿವೇದಿತಾ ಕಾಮತ್ ಹೇಳಿದರು.ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತಾಡಿದರು. ಸಮಾಜ ನಿಮ್ಮನ್ನು […]

ಕಡಬ ಸರಸ್ವತೀ ಪ್ರೌಢಶಾಲೆಯಲ್ಲಿ ಹಿಂದೂ ಸಾಮ್ರಾಜ್ಯ ದಿನ

ಕಡಬ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ಜೂನ್ 13ರಂದು ಹಿಂದೂ ಸಾಮ್ರಾಜ್ಯ ದಿನವನ್ನು ಆಚರಿಸಲಾಯಿತು.ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ಶ್ರೀಮತಿ ಪ್ರಮೀಳಾ ಲೋಕೇಶ್ ವಹಿಸಿ ಶಿವಾಜಿಯ ಜೀವನ, ಹಿಂದೂ ಸಾಮ್ರಾಜ್ಯವನ್ನು ಕಟ್ಟಿದ ರೀತಿಯನ್ನು ಸ್ಪುಟವಾಗಿ ತಿಳಿಸಿದರು. ವಿದ್ಯಾರ್ಥಿಗಳಾದ ರಕ್ಷಾ ಹಾಗೂ ದಿಗಂತ್ ಹಿಂದೂ ಸಾಮ್ರಾಜ್ಯ ದಿನದ ಮಹತ್ವವನ್ನು ತಿಳಿಸಿದರು. ವೇದಿಕೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಲಕ್ಷ್ಮೀಶ ಗೌಡ ಆರಿಗ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕ -ಶಿಕ್ಷಕೇತರವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಶಿಕ್ಷಕಿ ಶ್ರೀಮತಿ ಸೌಮ್ಯ ಕೆ.ಎ ಕಾರ್ಯಕ್ರಮ ನಿರ್ವಹಿಸಿದರು.