ಸರಸ್ವತೀ ವಿದ್ಯಾಲಯದಲ್ಲಿ ಪ್ರತಿಜ್ಞಾವಿಧಿ ಬೋಧನಾ ಕಾರ್ಯಕ್ರಮ

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಇಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿ ಸರಕಾರ ಮತ್ತು ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಹಾಗೂ ಪ್ರತಿಜ್ಞಾವಿಧಿ ಬೋಧನಾ ಕಾರ್ಯಕ್ರಮವು ಜೂನ್ 30ರಂದು ಕಡಬ ಹನುಮಾನ್ ನಗರದ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು ಕಾರ್ಯಕ್ರಮವನ್ನು ಪುತ್ತೂರಿನ ವಕೀಲರಾದ ಶ್ರೀ ಲತನ್ ರೈ ಗುತ್ತುಪಾಲು ದೀಪ ಬೆಳಗಿಸಿ ಉದ್ಘಾಟಿಸಿ ನಾಯಕತ್ವದಲ್ಲಿ ನಿರ್ಧಾರ ತೆಗೆದುಕೊಳ್ಳುವುದು ಪ್ರಾಮುಖ್ಯವಾಗಿದೆ. ತಂದೆ-ತಾಯಿಯನ್ನು ಪ್ರೀತಿಸಿ ,ಗೌರವಿಸಿ. ಹಿರಿಯರ ಶಿಕ್ಷಕರ ಮಾತನ್ನು ಕೇಳುವವರ ಜೀವನ ಉತ್ತಮವಾಗಿರುತ್ತದೆ. ದುಶ್ಚಟಗಳಿಂದ ದೂರ ಇರಿ ಎಂದು ವಿದ್ಯಾರ್ಥಿಗಳಿಗೆ […]
ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಉರಿಮಜಲು ಕೆ. ರಾಮ ಭಟ್ ಸಭಾಂಗಣ ಲೋಕಾರ್ಪಣೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಪ್ರಾರಂಭೋತ್ಸವ

ಪುತ್ತೂರು : ಪುತ್ತೂರಿನಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣವನ್ನು ನೀಡುವ ಗುರಿಯನ್ನು ಇರಿಸಿಕೊಂಡು 1986ರಲ್ಲಿ ಸ್ಥಾಪನೆಗೊಂಡ ವಿವೇಕಾನಂದ ಪಾಲಿಟೆಕ್ನಿಕ್ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಹೆಮ್ಮೆಯ ಅಂಗಸಂಸ್ಥೆಯಾಗಿದೆ. ಈ ಸಂಸ್ಥೆಯ ಸ್ಥಾಪನೆ ಹಾಗೂ ಅಭಿವೃದ್ಧಿಗೆ ಕಾರಣೀಭೂತರಾದ ಹಿರಿಯರಾದ ಉರಿಮಜಲು ಕೆ. ರಾಮ ಭಟ್ಟರ ಸವಿನೆನಪಿಗಾಗಿ 2025 ನೇ ಜುಲೈ 2ರಂದು ಕಾಲೇಜಿನಲ್ಲಿ ನವೀಕೃತ ಉರಿಮಜಲು ಕೆ. ರಾಮ ಭಟ್ ಸಭಾಂಗಣದ ಲೋಕಾರ್ಪಣೆ ಕಾರ್ಯಕ್ರಮ ಹಾಗೂ ಜೊತೆಯಲ್ಲಿ ಪಾಲಿಟೆಕ್ನಿಕ್ ನ ಪ್ರಥಮ ವರ್ಷದ ವಿದ್ಯಾರ್ಥಿಗಳ ಪ್ರಾರಂಭೋತ್ಸವವನ್ನು ಕೂಡ […]