ಜಮ್ಮುಕಾಶ್ಮೀರ ಭಾರತದ ಮುಕುಟಪ್ರಾಯವಾಗಿ ಕಂಗೊಳಿಸುವ ರಾಜ್ಯ. ಪ್ರವಾಸಿಗರ ಸ್ವರ್ಗ ತಾಣವಾದ ಕಾಶ್ಮೀರದ ಕಾರ್ಗಿಲ್ ಪ್ರದೇಶದ ಮೇಲೆ 1999ರಲ್ಲಿ ನಡೆದ ಪಾಕಿಸ್ತಾನದ ದಾಳಿ ಅತ್ಯಂತ ಶೋಚನೀಯ ಸಂಗತಿಯಾಗಿದೆ. ಈ ಕಾರ್ಗಿಲ್ ಕದನದಲ್ಲಿ ಕೆಚ್ಚೆದೆಯ ಹೋರಾಟ ನಡೆಸಿದ ಸೈನಿಕರ ಹೋರಾಟದ ಫಲವೇ ಕಾರ್ಗಿಲ್ ವಿಜಯೋತ್ಸವ. ನಿರಂತರ ದೇಶಸೇವೆಯಲ್ಲಿ ತೊಡಗಿರುವ ಸೈನಿಕರು ನಮ್ಮೆಲ್ಲರಿಗೂ ಪ್ರೇರಣಾದಾಯಿಗಳು’ ಎಂದು ಶ್ರೀ ರಾಧಾಕೃಷ್ಣ ಅಡ್ಯಂತಾಯ, ಶ್ರೀರಾಮ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರು ಮಧುಕರ ಸಭಾಂಗಣದಲ್ಲಿ ನಡೆದ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮ ಉದ್ದೇಶಿಸಿ ಬೌದ್ಧಿಕ್ ನೀಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರಿಗೆ ಪ್ರೇರಣಾದಾಯಿಯಾದ ‘ವಂದೇ ಮಾತರಂ’ ಗೀತೆಗೆ ಹೆಜ್ಜೆ ಹಾಕಿದರು. ಕಾರ್ಯಕ್ರವನ್ನು ಮೇಧಿನಿ (8 ಏಕಲವ್ಯ) ನಿರೂಪಿಸಿದರು. ಪ್ರೌಢಶಾಲಾ ಇಂಗ್ಲೀಷ್ ಶಿಕ್ಷಕರಾದ ಶ್ರೀ ಪ್ರಶಾಂತ ನೇರೋಳು ಕಾರ್ಯಕ್ರಮ ಸಂಯೋಜಿಸಿದರು.