ಇಂಟರ್ಯಾಕ್ಟ್-2025 ಸ್ಪರ್ಧೆಯಲ್ಲಿ ಚಿನ್ನ-ಕಂಚಿನ ಪದಕ

Leaf
Leaf

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಜಿಯ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಅಂತರ್ಕಾಲೇಜು ಸಾಂಸ್ಕೃತಿಕ ಉತ್ಸವದಲ್ಲಿ ಎರಡು ಚಿನ್ನ ಹಾಗೂ ಒಂದು ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ.
ಬೆಂಗಳೂರಿನ ಗ್ಲೋಬಲ್ ಅಕಾಡಮಿ ಆಫ್ ಟೆಕ್ನಾಲಜಿಯಲ್ಲಿ ನಡೆದ ಇಂಟರ್ಯಾಕ್ಟ್-2025 ಸ್ಪರ್ಧೆಯಲ್ಲಿ ಕಾಲೇಜಿನ ಭೂಮಿಕಾ ಕಲಾ ಸಂಘ ತಂಡವು ತನ್ನ ಅಪೂರ್ವ ಪ್ರತಿಭೆಯನ್ನು ಪ್ರದರ್ಶಿಸಿ ವಿಶೇಷ ಸಾಧನೆಯನ್ನು ಮಾಡಿದೆ.
ಸುಮಾರು 100ಕ್ಕೂ ಹೆಚ್ಚು ಇಂಜಿನಿಯರಿಂಗ್ ಕಾಲೇಜುಗಳ ಕಲಾ ತಂಡಗಳು ಭಾಗವಹಿಸಿದ್ದು, ಕಾಲೇಜಿನಿಂದ 34 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವ್ಯಂಗ್ಯಚಿತ್ರ ವಿಭಾಗದಲ್ಲಿ ದ್ವಿತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿ ಮನ್ನಿತ್ ಗೌಡ ಇವರು ಚಿನ್ನದ ಪದಕ, ಸ್ವರ ವಾದ್ಯ ಸ್ಪರ್ಧೆಯಲ್ಲಿ ಪ್ರಥಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ತನ್ಮಯಿ ಉಪ್ಪಂಗಳ ಇವರು ಚಿನ್ನದ ಪದಕ ಹಾಗೂ ಶಾಸ್ತ್ರೀಯ ಸಂಗೀತ ಹಾಡುಗಾರಿಕಾ ವಿಭಾಗದಲ್ಲಿ ದ್ವಿತೀಯ ವರ್ಷದ ಎಐಎಂಎಲ್ ವಿಭಾಗದ ಕಾರ್ತಿಕ ಶ್ಯಾಮ ಇವರು ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ.
ಕಾಲೇಜಿನ ಸಾಂಸ್ಕೃತಿಕ ವೇದಿಕೆ ಭೂಮಿಕಾ ಕಲಾ ಸಂಘದ ನಿರ್ದೇಶಕ ಪೆÇ್ರ.ಸುದರ್ಶನ್.ಎಂ.ಎಲ್ ಹಾಗೂ ಸಹನಿರ್ದೇಶಕಿ ಡಾ.ಶ್ವೇತಾಂಬಿಕಾ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಈ ಸಾಧನೆಯನ್ನು ಮಾಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Related News

Featured image
Events
07/08/2025

ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಕರಾಟೆ ಸ್ಪರ್ಧೆಯಲ್ಲಿ ಪ್ರಾಂತ ಮಟ್ಟಕ್ಕೆ ಆಯ್ಕೆ

News
07/08/2025

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ: ಪೋಷಕರ ಸಭೆ

News
07/08/2025

ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಪುತ್ತೂರು : ಕೋಡ್ ಕ್ರಾಫ್ಟ್ ವಿಜ್ಞಾನ ಮೇಳ