ಕಬಡ್ಡಿ: ಮಂಗಳೂರು ವಿಭಾಗ ಮಟ್ಟದಲ್ಲಿ ಚಾಂಪಿಯನ್

Leaf
Leaf

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮಹಿಳೆಯರ ಕಬಡ್ಡಿ ತಂಡವು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಂಗಳೂರು ವಿಭಾಗ ಮಟ್ಟದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಬೆಂಜನಪದವಿನÀ ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಈ ಕ್ರೀಡಾ ಕೂಟದಲ್ಲಿ ಮಂಗಳೂರು ವಿಭಾಗದ ವಿವಿಧ ಇಂಜಿನಿಯರಿಂಗ್ ಕಾಲೇಜಿನ ತಂಡಗಳು ಭಾಗವಹಿಸಿದ್ದವು. ಇದರಲ್ಲಿ ಅತ್ಯುತ್ತಮ ನಿರ್ವಹಣೆಯನ್ನು ನೀಡಿದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ತಂಡವು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.
ಈ ವಿಜಯದೊಂದಿಗೆ ತಂಡವು ತಿಪಟೂರಿನ ಕಲ್ಪತರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಅರ್ಹತೆಯನ್ನು ಗಳಿಸಿಕೊಂಡಿದೆ.
ವರ್ಷಿತಾ.ಪಿ.ಆಳ್ವ, ರಶ್ಮಿ.ಎ, ಅನೂಶಾ.ಎ, ಸಿಂಚನ.ವಿ.ಎಸ್, ಅರ್ಪಿತಾ.ಎ, ಪೂರ್ವಿಕಾ.ಎ.ಎಸ್, ಶ್ರಾವ್ಯ.ಎ, ರಚನ.ಕೆ.ಡಿ, ಪ್ರಜ್ಞಾ.ಕೆ, ಸ್ರುಜನಾ.ಎಸ್, ಶ್ರಾವ್ಯ.ಎಲ್.ಕೆ ಮತ್ತು ತೇಜಸ್ವಿನಿ.ಯು ಚಾಂಪಿಯನ್ ತಂಡದ ಸದಸ್ಯರಾಗಿದ್ದಾರೆ.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಅವರು ವಿಜೇತ ತಂಡಕ್ಕೆ ತರಬೇತಿಯನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Related News

News
02/07/2025

ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 7 ರ್ಯಾಂಕ್ ಪಡೆದು ದಾಖಲೆ

News
16/06/2025

ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶ

Events
16/06/2025

ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ