ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 7 ರ್ಯಾಂಕ್ ಪಡೆದು ದಾಖಲೆ

Leaf
Leaf

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ 2024-25ನೇ ಶೈಕ್ಷಣಿಕ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 7 ರ್ಯಾಂಕ್‍ಗಳನ್ನು ಪಡೆದು ದಾಖಲೆಯನ್ನು ನಿರ್ಮಿಸಿದ್ದಾರೆ.
ಕಾಲೇಜಿನ ಡಾಟಾ ಸೈನ್ಸ್ ವಿಭಾಗಕ್ಕೆ 4, ಇಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗಕ್ಕೆ 2 ಮತ್ತು ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್ ವಿಭಾಗಕ್ಕೆ ಒಂದು ರ್ಯಾಂಕ್ ಲಭಿಸಿರುತ್ತದೆ.
4 ವರ್ಷಗಳ ಕೆಳಗೆ ನೂತನವಾಗಿ ಆರಂಭವಾದ ಡಾಟಾ ಸೈನ್ಸ್ ವಿಭಾಗದ ಪ್ರಥಮ ಬ್ಯಾಚ್‍ನ ವಿದ್ಯಾರ್ಥಿಗಳು ಅಪೂರ್ವ ಸಾಧನೆಯನ್ನು ಮಾಡಿದ್ದು ಒಂದು ಚಿನ್ನದ ಪದಕದ ಜೆತೆಗೆ ಒಟ್ಟು 4 ರ್ಯಾಂಕುಗಳನ್ನು ಗಳಿಸಿಕೊಂಡಿದ್ದಾರೆ. ಸುಚಿತಾ ಇವರು 9.60 ಸಿಜಿಪಿಎ ಅಂಕಗಳೊಂದಿಗೆ ಪ್ರಥಮ ರ್ಯಾಂಕ್ ಹಾಗೂ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ. ಅದೇ ವಿಭಾಗದ ಪ್ರಜ್ಞಾಶಂಕರಿ 9.52 ಸಿಜಿಪಿಎ ಅಂಕಗಳೊಂದಿಗೆ ದ್ವಿತೀಯ ರ್ಯಾಂಕ್, ಸಿಂಚನಲಕ್ಷ್ಮಿ 9.48 ಸಿಜಿಪಿಎ ಅಂಕಗಳೊಂದಿಗೆ 3ನೇ ರ್ಯಾಂಕ್, ಶ್ರೀಲಕ್ಷ್ಮಿ.ವಿ 9.35 ಸಿಜಿಪಿಎ ಅಂಕಗಳೊಂದಿಗೆ 8ನೇ ರ್ಯಾಂಕ್ ಗಳಿಸಿದ್ದಾರೆ.
ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್ ವಿಭಾಗದ ರವಿನಾರಾಯಣ.ಕೆ.ಎಸ್ 9.63 ಸಿಜಿಪಿಎ ಅಂಕಗಳೊಂದಿಗೆ ದ್ವಿತೀಯ ರ್ಯಾಂಕ್ ಪಡೆದುಕೊಂಡಿದ್ದಾರೆ.
ಇಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ರಾಹುಲ್.ಕೆ 9.59 ಸಿಜಿಪಿಎ ಅಂಕಗಳೊಂದಿಗೆ 7ನೇ ರ್ಯಾಂಕ್ ಹಾಗೂ ಲಿಖಿತ.ಕೆ 9.59 ಸಿಜಿಪಿಎ ಅಂಕಗಳೊಂದಿಗೆ 9ನೇ ರ್ಯಾಂಕ್‍ನ್ನು ತಮ್ಮದಾಗಿಸಿಕೊಂಡಿದ್ದಾರೆ.
ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಅವರ ಸಮರ್ಥ ಮುಂದಾಳುತ್ವದಲ್ಲಿ ಡಾಟಾ ಸೈನ್ಸ್ ವಿಭಾಗ ಮುಖ್ಯಸ್ಥೆ ಪೆÇ್ರ.ರೂಪಾ.ಜಿ.ಕೆ, ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್ ವಿಭಾಗ ಮುಖ್ಯಸ್ಥ ಡಾ.ಗೋವಿಂದರಾಜ್.ಪಿ, ಇಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗ ಮುಖ್ಯಸ್ಥ ಡಾ.ಶ್ರೀಕಾಂತ್ ರಾವ್.ಎಸ್.ಕೆ ಹಾಗೂ ಪ್ರಾಧ್ಯಾಪಕರ ಸಮರ್ಥ ಮಾರ್ಗದರ್ಶನದಲ್ಲಿ ವಿಧ್ಯಾರ್ಥಿಗಳು ಇತಿಹಾಸ ನಿರ್ಮಿಸಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್, ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಅಧ್ಯಕ್ಷರು, ಸಂಚಾಲಕರು, ನಿರ್ದೇಶಕರು, ಪ್ರಾಂಶುಪಾಲರು, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ ಅವರನ್ನು ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *

Related News

Events
03/07/2025

ಸರಸ್ವತೀ ವಿದ್ಯಾಲಯದಲ್ಲಿ ಪ್ರತಿಜ್ಞಾವಿಧಿ ಬೋಧನಾ ಕಾರ್ಯಕ್ರಮ

News
03/07/2025

ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಉರಿಮಜಲು ಕೆ. ರಾಮ ಭಟ್ ಸಭಾಂಗಣ ಲೋಕಾರ್ಪಣೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಪ್ರಾರಂಭೋತ್ಸವ

News
16/06/2025

ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶ