ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ: ಪೋಷಕರ ಸಭೆ

Leaf
Leaf

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ ಇದರ ಪ್ರಸಕ್ತ ಶೈಕ್ಷಣಿಕ ವರ್ಷದ ಪೋಷಕರ ಸಭೆಯು ಸಂಸ್ಥೆಯ ಅಧ್ಯಕ್ಷರಾದ ಶ್ರೀ ರವಿರಾಜ್ ಶೆಟ್ಟಿ ಕಡಬ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕøತ ಶ್ರೀ ಟಿ. ನಾರಾಯಣ ಭಟ್ ರಾಮಕುಂಜ ಆಗಮಿಸಿ ಪೋಷಕರ ಸಂಸ್ಕಾರ ಬದುಕಿನ ಕುರಿತು ಮಾರ್ಗದರ್ಶನವನ್ನು ನೀಡಿದರು. ಸಭೆಯಲ್ಲಿ ಪೆÇೀಷಕರು ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. ವೇದಿಕೆಯಲ್ಲಿ ಆಡಳಿತ ಮಂಡಳಿಯ ಕೋಶಾಧಿಕಾರಿಗಳಾದ ಶ್ರೀ ಲಿಂಗಪ್ಪ. ಜೆ, ಮುಖ್ಯ ಶಿಕ್ಷಕಿ ಶ್ರೀಮತಿ ಶೈಲಶ್ರೀ ರೈ ಎಸ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಲಕ್ಷ್ಮೀಶ ಗೌಡ ಆರಿಗ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಜಲಜಾಕ್ಷಿ ಬಿ.ವಿ. ವಂದಿಸಿದರು. ವಿದ್ಯಾರ್ಥಿನಿ ಕುಮಾರಿ ಹರಿಪ್ರಿಯಾ ಹರಿದಾಸ್ ಪ್ರಾರ್ಥಿಸಿ ಶಿಕ್ಷಕಿ ಕುಮಾರಿ ದೀಕ್ಷಿತಾ ಕೆ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

Related News

Featured image
Events
07/08/2025

ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಕರಾಟೆ ಸ್ಪರ್ಧೆಯಲ್ಲಿ ಪ್ರಾಂತ ಮಟ್ಟಕ್ಕೆ ಆಯ್ಕೆ

News
07/08/2025

ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಪುತ್ತೂರು : ಕೋಡ್ ಕ್ರಾಫ್ಟ್ ವಿಜ್ಞಾನ ಮೇಳ

News
07/08/2025

ಇಲೆಕ್ಡ್ರಿಕ್ ಸೈಕಲ್ ತಯಾರಿಸಿದ ವಿವೇಕಾನಂದ ಪಾಲಿಟೆಕ್ನಿಕ್ ವಿದ್ಯಾರ್ಥಿ ವಿಶಾಲ್:-