ಲಯನ್ಸ್ ಕ್ಲಬ್ ಮತ್ತು ಶ್ರೀರಾಮ ವಿದ್ಯಾಕೇಂದ್ರ ಇದರ ವತಿಯಿಂದ ಪರಿಸರ ಸಂರಕ್ಷಣೆ ಮತ್ತು 1000 ಗಿಡಗಳನ್ನು ನೆಡುವ ಉದ್ದೇಶವನ್ನಿಟ್ಟುಕೊಂಡು ಲಯನ್ಸ್ ಕ್ಲಬ್ 100 ವರ್ಷ ಆಚರಣೆಯ ಹಿನ್ನಲೆಯಲ್ಲಿ ಶ್ರೀರಾಮ ವಿದ್ಯಾಕೇಂದ್ರದ ವಠಾರದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ವಿದ್ಯಾಕೇಂದ್ರದ ಸಂಚಾಲಕರು ಡಾ| ಪ್ರಭಾಕರ ಭಟ್ ಕಲ್ಲಡ್ಕ ಇವರು ಕದಂಬ ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜೊತೆಗೆ ಪರಿಸರ ಪ್ರೇಮಿ ದಿನೇಶ್ ನಾಯಕ್, ಲಯನ್ಸ್ ಜಿಲ್ಲಾ ಗವರ್ನರ್ ಕವಿತಾ ಎಸ್. ಶಾಸ್ತ್ರಿ, ಮಾಜಿ ಗವರ್ನರ್ ಕೆ.ಸಿ ಪ್ರಭು, ಲಯನ್ಸ್ ಆಶಾ ಸಿ. ಶೆಟ್ಟಿ, ಲಯನ್ಸ್ ಆಶಾ ಹೆಜಮಾಡಿ, ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ, ಮುಖ್ಯ ಕಾರ್ಯನಿರ್ವಾಹಕ ವಸಂತ ಮಾಧವ, ಪದವಿ ಕಾಲೇಜಿನ ಪ್ರಾಂಶುಪಾಲರು ಕೃಷ್ಣಪ್ರಸಾದ್, ಪದವಿ ಪೂರ್ವ ವಿಭಾಗದ ವಸಂತ ಬಲ್ಲಾಳ, ಡಾ| ಕಮಲಾ ಪ್ರಭಾಕರ ಭಟ್, ಉಪನ್ಯಾಸಕ ವೃಂದ ಮತ್ತು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.