• 08251 236599
  • 08251 236444
  • vvsputtur@gmail.com

ಶಿಕ್ಷಣ ಸಂಸ್ಥೆಗಳಿಗೆ ಸಾಮಾಜಿಕ ಜಾಲತಾಣ, ವೆಬ್­ಸೈಟ್ ಮತ್ತು ಮಾಧ್ಯಮಗಳ ಅವಶ್ಯಕತೆ ಮತ್ತು ಅನುಷ್ಠಾನ – ಕಾರ್ಯಾಗಾರ

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ) ವತಿಯಿಂದ ವಿವೇಕಾನಂದ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ‘ಶಿಕ್ಷಣ ಸಂಸ್ಥೆಗಳಿಗೆ ಸಾಮಾಜಿಕ ಜಾಲತಾಣ, ವೆಬ್ಸೈಟ್ ಮತ್ತು ಮಾಧ್ಯಮಗಳ ಅವಶ್ಯಕತೆ ಮತ್ತು ಅನುಷ್ಠಾನ’ ವಿಷಯದ ಕುರಿತಾಗಿ ಒಂದು ದಿನದ ಕಾರ್ಯಾಗಾರವು ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದಲ್ಲಿ ದಿನಾಂಕ 23 ಅಕ್ಟೋಬರ್ 2021 ರಂದು ನಡೆಯಿತು. ಕಾರ್ಯಾಗಾರಕ್ಕೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ| ಕೆ.ಯಂ. ಕೃಷ್ಣ ಭಟ್ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿಯ ನಿರ್ದೇಶಕ ಮುರಳಿಧರ ಕೆ. ಪ್ರಸ್ತಾವನೆಗೈದು ಸ್ವಾಗತಿಸಿದರು. ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಮಂಗಳೂರಿನ ಅಕ್ಷರೋದ್ಯಮದ ಮಾಲಿಕ ಶ್ರೀ ಸುನಿಲ್ ಕುಲಕರ್ಣಿ ಅವರು ವಿವೇಕಾನಂದ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವತಿಯಿಂದ ಆರಂಭವಾಗಲಿರುವ ವೆಬ್ ಮೀಡಿಯಾ ‘ವಿಕಸನ ನ್ಯೂಸ್.ಇನ್’ ಗೆ ಚಾಲನೆ ನೀಡಿದರು.

ಉದ್ಘಾಟನಾ ಕಾರ್ಯಕ್ರಮದ ನಂತರದಲ್ಲಿ ವಿವಿಧ ಗೋಷ್ಠಿಗಳು ನಡೆದವು. ಮಂಗಳೂರಿನ ಅಕ್ಷರೋದ್ಯಮದ ಮಾಲಿಕ ಶ್ರೀ ಸುನಿಲ್ ಕುಲಕರ್ಣಿ ಶಿಕ್ಷಣ ಸಂಸ್ಥೆಗಳಿಗೆ ವೆಬ್ಸೈಟ್‌ನ ಪರಿಣಾಮಕಾರಿ ಬಳಕೆಯ ಕುರಿತಾಗಿ ಮಾಹಿತಿ ನೀಡಿದರು. ಪತ್ರಕರ್ತ ಬಿ.ಟಿ. ರಂಜನ್ ಮುದ್ರಣ ಮಾಧ್ಯಮದ ವರದಿಗಾರಿಕೆ ಕುರಿತಾಗಿ, ವಿವೇಕಾನಂದ ಇಂಜನಿಯರಿಂಗ್ ಕಾಲೇಜಿನ ಉಪನ್ಯಾಸಕ ಶ್ರೀ ಅಜ‌ಯ್‌ ಶಾಸ್ತ್ರೀ ಸಾಮಾಜಿಕ ಜಾಲಗಳ ಕುರಿತಾಗಿ ಹಾಗೂ ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ವೆಬ್ ಮೀಡಿಯಾಗಳ ಬಳಕೆಯ ಕುರಿತಾಗಿ ಮಾಹಿತಿ ನೀಡಿದರು.

ಕಾರ್ಯಾಗಾರದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ನಿಕಟಪೂರ್ವ ಕಾರ್ಯದರ್ಶಿ ಶ್ರೀ ಶಿವಪ್ರಸಾದ್. ಇ. ವಹಿಸಿದ್ದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ಶ್ರೀ ಮುರಳೀಧರ್ ಉಪಸ್ಥಿತರಿದ್ದರು. ಉಪ್ಪಿನಂಗಡಿ ಶ್ರೀರಾಮ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ರಘುರಾಮ್ ಭಟ್ ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘದ ವಿಶೇಷಾಧಿಕಾರಿ ಶ್ರೀ ವೆಂಕಟೇಶ ನಿರೂಪಿಸಿದರು.

Highslide for Wordpress Plugin