ಶಿಕ್ಷಕರು ಕೇವಲ ಮಾಹಿತಿಯನ್ನು ನೀಡುವ ಕಾರ್ಯವನ್ನು ಮಾಡುವುದಲ್ಲ ವಿದ್ಯಾರ್ಥಿಗಳ ಮನದಲ್ಲಿ ಉತ್ತಮ ಭಾವ ಉದ್ದೀಪನ ಮಾಡುವ ಕಾರ್ಯವನ್ನು ಮಾಡಬೇಕು. ಶಿಕ್ಷಕ ವಿದ್ಯಾರ್ಥಿಗಳ ಜೀವನಕ್ಕೆ ಕೇವಲ ಬೆಳಕನ್ನು ನೀಡುವುದಲ್ಲದೇ ಸಮಾಜಕ್ಕೆ ಆದರ್ಶವಾಗಿ ಸಮಾಜವನ್ನು ತಿದ್ದುವ ಕಾರ್ಯದಲ್ಲೂ ತೊಡಗಿಸಿಕೊಳ್ಳಬೇಕು. ಈ ರೀತಿಯ ಆದರ್ಶವನ್ನು ಬೆಳೆಸಿಕೊಂಡವರು ಸರ್ವಪಲ್ಲಿ ರಾಧಾಕೃಷ್ಣನ್‌ರವರು. ಅವರ ಜೀವನ ನಮ್ಮೆಲ್ಲರಿಗೂ ಸ್ಫೂರ್ತಿಯಾಗಿದೆ ಎಂದು ಮಧುಕರ ಸಭಾಂಗಣದಲ್ಲಿ ನಡೆದ ಪ್ರೌಢಶಾಲಾ ವಿಭಾಗದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶ್ರೀ ವಿನೋದ್ ತಿಳಿಸಿದರು. ಪ್ರಾರಂಭದಲ್ಲಿ ವಿದ್ಯಾರ್ಥಿ ಪ್ರಮುಖರು ಎಲ್ಲಾ ಶಿಕ್ಷಕರಿಗೆ ಹೂಗುಚ್ಚ ನೀಡಿ
ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತದಲ್ಲಿ ಭಾರತೀಯರೆಲ್ಲರೂ ಸಹೋದರರಂತೆ ಪರಸ್ಪರ ಸಾಮರಸ್ಯದಿಂದ ಜೀವಿಸಿದರೆ ಭಾರತ ಅಭಿವೃದ್ಧಿಯಾಗುವುದು. ರಕ್ಷಾಬಂಧನ ಉತ್ಸವ ಆಚರಿಸುವ ಮೂಲಕ ಜಾತಿ, ಮತ, ಭಾಷೆ ಎಂಬ ಭೇದವಿಲ್ಲದೆ ಎಲ್ಲರೂ ಒಗ್ಗಟ್ಟಿನಿಂದ ಬಾಳುವಂತಾಗಬೇಕು, ಒಳಗಿನ ಭಿನ್ನಮತಗಳನ್ನು ಹೊರಗಿನ ಶತ್ರುಗಳನ್ನು ಏಕತೆಯಿಂದ ಎದುರಿಸಬೇಕೆಂದು ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಪರಮೇಶ್ವರ ಹೆಗ್ಡೆ ಹೇಳಿದರು. ಅವರು ಶ್ರೀರಾಮ ಪ್ರೌಢಶಾಲೆಯಲ್ಲಿ ನಡೆದ ರಕ್ಷಾಬಂಧನ ಮತ್ತು ಸಂಸ್ಕೃತೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಸಂಸ್ಕೃತ ಕಲಿಯುವುದರಿಂದ ಸುಸಂಸ್ಕೃತರಾಗುತ್ತೇವೆ. ಭಾಷೆಯ ಬಳಕೆಯಿಂದ ಭಾಷೆ ಉಳಿಯುತ್ತದೆ.
ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ 9ನೇ ತರಗತಿಯ ಗಾಯತ್ರಿ ಭಟ್ ಹಿಂದೂಸ್ಥಾನಿ ಸಂಗೀತ ಸ್ಪರ್ಧೆಯಲ್ಲಿ, 9ನೇ ತರಗತಿಯ ಸ್ಪೂರ್ತಿ ರಂಗೋಲಿ ಸ್ಪರ್ಧೆಯಲ್ಲಿ ಹಾಗೂ 9ನೇ ತರಗತಿಯ ಪ್ರಜ್ವಲ್ ರೈ ಮಿಮಿಕ್ರಿ ಸ್ಪರ್ಧೆಯಲ್ಲಿ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ತಾಲೂಕು ಮಟ್ಟದಲ್ಲಿ 10 ನೇ ತರಗತಿಯ ಗೋವಿಂದ ಕೃಷ್ಣ ಎ. ಸಂಸ್ಕೃತ ಭಾಷಣ, 9ನೇ ತರಗತಿಯ ಗಾಯತ್ರಿ ಭಟ್ ಗಝಲ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಹಾಗೂ 8 ನೇ ತರಗತಿಯ ಶ್ರೇಯಸ್ ಯಕ್ಷಗಾನ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ.
ಸಾವಿರಾರು ವಿದ್ಯಾರ್ಥಿಗಳು ಸಮಾಜಕ್ಕಾಗಿ ಬದುಕುವಂತೆ ಪ್ರೇರೇಪಿಸುವ ರಾಷ್ಟ್ರಪ್ರೇರಿತ ಭಾರತೀಯ ಶಿಕ್ಷಣವನ್ನು ವಿದ್ಯಾಕೇಂದ್ರ ನೀಡುತ್ತಿದೆ. ಈ ರೀತಿಯಲ್ಲಿ ರಾಷ್ಟ್ರೀಯ ದೃಷ್ಟಿಕೋನ, ಸಂಸ್ಕಾರಯುತ ಶಿಕ್ಷಣ ಶಾಲೆಯಲ್ಲಿ ಮಾತ್ರ ಸೀಮಿತವಾಗದೇ, ಮನೆಯಲ್ಲಿ ಅವುಗಳನ್ನು ಮುಂದುವರೆಸುವಂತೆ ಪೋಷಕರು ತಮ್ಮ ಮಕ್ಕಳಿಗೆ ಪ್ರೇರಣೆ ನೀಡುವುದು ಅವಶ್ಯಕ. ಈ ರೀತಿಯಾದಾಗ ಮಾತ್ರ ಮಗುವಿನ ಪರಿಪೂರ್ಣ ವ್ಯಕ್ತಿತ್ವದ ಬೆಳವಣಿಗೆ ಸಾಧ್ಯ ಎಂದು ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ಡಾ||ಪ್ರಭಾಕರಭಟ್ ಕಲ್ಲಡ್ಕ ತಿಳಿಸಿದರು. ಅವರು ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ದಿನಾಂಕ: 4-8-2015 ರಂದು ನಡೆದ ವಿಭಾಗದ ಪೋಷಕರ ಸಭೆಯನ್ನುದ್ದೇಶಿಸಿ ಮಾರ್ಗದರ್ಶನ
ಜಮ್ಮುಕಾಶ್ಮೀರ ಭಾರತದ ಮುಕುಟಪ್ರಾಯವಾಗಿ ಕಂಗೊಳಿಸುವ ರಾಜ್ಯ. ಪ್ರವಾಸಿಗರ ಸ್ವರ್ಗ ತಾಣವಾದ ಕಾಶ್ಮೀರದ ಕಾರ್ಗಿಲ್ ಪ್ರದೇಶದ ಮೇಲೆ 1999ರಲ್ಲಿ ನಡೆದ ಪಾಕಿಸ್ತಾನದ ದಾಳಿ ಅತ್ಯಂತ ಶೋಚನೀಯ ಸಂಗತಿಯಾಗಿದೆ. ಈ ಕಾರ್ಗಿಲ್ ಕದನದಲ್ಲಿ ಕೆಚ್ಚೆದೆಯ ಹೋರಾಟ ನಡೆಸಿದ ಸೈನಿಕರ ಹೋರಾಟದ ಫಲವೇ ಕಾರ್ಗಿಲ್ ವಿಜಯೋತ್ಸವ. ನಿರಂತರ ದೇಶಸೇವೆಯಲ್ಲಿ ತೊಡಗಿರುವ ಸೈನಿಕರು ನಮ್ಮೆಲ್ಲರಿಗೂ ಪ್ರೇರಣಾದಾಯಿಗಳು’ ಎಂದು ಶ್ರೀ ರಾಧಾಕೃಷ್ಣ ಅಡ್ಯಂತಾಯ, ಶ್ರೀರಾಮ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರು ಮಧುಕರ ಸಭಾಂಗಣದಲ್ಲಿ ನಡೆದ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮ ಉದ್ದೇಶಿಸಿ ಬೌದ್ಧಿಕ್ ನೀಡಿದರು.
ವಿದ್ಯಾರ್ಥಿಗಳ ಸಾಧನೆ, ಸ್ವ-ಪ್ರತಿಭೆ, ಜ್ಞಾನವನ್ನು ವೃದ್ಧಿಸುವಲ್ಲಿ ವಿವಿಧ ಸಂಘಗಳು ಸಹಕಾರಿಯಾಗಲಿ. ವಿವಿಧ ಸಂಘಗಳ ಯೋಜನೆ ಭಾರತೀಯ ಪರಿಕಲ್ಪನೆ, ಪುನರ್ಜೀವನದ ನಿಟ್ಟಿನಲ್ಲಿ ನಡೆಯಲಿ ಎಂದು ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ಪ್ರೌಢವಿಭಾಗದ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾರ್ಯಕ್ರಮ ಉದ್ಘಾಟಿಸಿದ ಶ್ರೀ ವಸಂತಮಾಧವ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀರಾಮ ವಿದ್ಯಾಕೇಂದ್ರ ತಿಳಿಸಿದರು. ಮತ್ತು ಸಂಘದ ಎಲ್ಲಾ ಪ್ರಮುಖರಿಗೆ ಸಸಿಗಳನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಪ್ರೌಢವಿಭಾಗದ ಮುಖ್ಯ ಶಿಕ್ಷಕರಾದ ಶ್ರೀ ರಮೇಶ್ ಶ್ರೀಮಾನ್ ಉಪಸ್ಥಿತರಿದ್ದರು. ಶ್ರೀ ಗೋಪಾಲ್ ಶ್ರೀಮಾನ್ ಸ್ವಾಗತಿಸಿ, ಶ್ರೀಮತಿ ಸೌಮ್ಯ ವಂದಿಸಿ,
ಲಯನ್ಸ್ ಕ್ಲಬ್ ಮತ್ತು ಶ್ರೀರಾಮ ವಿದ್ಯಾಕೇಂದ್ರ ಇದರ ವತಿಯಿಂದ ಪರಿಸರ ಸಂರಕ್ಷಣೆ ಮತ್ತು 1000 ಗಿಡಗಳನ್ನು ನೆಡುವ ಉದ್ದೇಶವನ್ನಿಟ್ಟುಕೊಂಡು ಲಯನ್ಸ್ ಕ್ಲಬ್ 100 ವರ್ಷ ಆಚರಣೆಯ ಹಿನ್ನಲೆಯಲ್ಲಿ ಶ್ರೀರಾಮ ವಿದ್ಯಾಕೇಂದ್ರದ ವಠಾರದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ವಿದ್ಯಾಕೇಂದ್ರದ ಸಂಚಾಲಕರು ಡಾ| ಪ್ರಭಾಕರ ಭಟ್ ಕಲ್ಲಡ್ಕ ಇವರು ಕದಂಬ ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜೊತೆಗೆ ಪರಿಸರ ಪ್ರೇಮಿ ದಿನೇಶ್ ನಾಯಕ್, ಲಯನ್ಸ್ ಜಿಲ್ಲಾ ಗವರ್ನರ್ ಕವಿತಾ ಎಸ್. ಶಾಸ್ತ್ರಿ, ಮಾಜಿ ಗವರ್ನರ್ ಕೆ.ಸಿ ಪ್ರಭು, ಲಯನ್ಸ್
ಶಿಕ್ಷಕರು ತಮ್ಮ ನಡೆನುಡಿಗಳಲ್ಲಿ ವಿದ್ಯಾರ್ಥಿಗಳಿಗೆ ಆದರ್ಶವಾಗಿರಬೇಕು. ಅಧ್ಯಾಪಕರು ವಿದ್ಯಾರ್ಥಿಯ ಜೊತೆಯಲ್ಲಿದ್ದು ಗುಣನಡತೆ ತಿದ್ದುವುದಲ್ಲದೆ ದೇಶಕ್ಕಾಗಿ ಬದುಕುವುದನ್ನು ಕಲಿಸಿಕೊಡಬೇಕು ಎಂದು ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ಡಾ| ಪ್ರಭಾಕರ ಭಟ್ ಹೇಳಿದರು. ಅವರು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ವಿದ್ಯಾಭಾರತಿ ಕರ್ನಾಟಕದ ದ.ಕ. ಜಿಲ್ಲಾ ಶೈಕ್ಷಣಿಕ ಸಹಮಿಲನ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಭಾರತದ ಮಕ್ಕಳು ಇತರ ದೇಶಗಳ ಮಕ್ಕಳಿಗಿಂತಲೂ ಬುದ್ಧಿವಂತರು. ಪ್ರತಿಯೊಂದು ಮಗುವಿನಲ್ಲಿಯೂ ವಿಶೇಷತೆ ಇದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ಶಿಕ್ಷಕರಿಂದ ಆಗಬೇಕು. ಭಾರತೀಯ ಕುಟುಂಬ