ಕಡಬ: ಸರಸ್ವತೀ ವಿದ್ಯಾಲಯ ಸಮೂಹ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ

ಸರಸ್ವತೀ ವಿದ್ಯಾಲಯ ಸಮೂಹ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟವು ಡಿಸೆಂಬರ್ 16ರಂದು ಹನುಮಾನ್ ನಗರದ ಮೈದಾನದಲ್ಲಿ ನಡೆಯಿತು.ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸಂಸ್ಥೆಯ ನಿಕಟಪೂರ್ವ ಸಂಚಾಲಕರು, ಪ್ರಸ್ತುತ ವಿವೇಕಾನಂದ ವಿದ್ಯಾವರ್ಧಕ ಸಂಘದ ಪುತ್ತೂರು (ರಿ.) ಇದರ ಸಹಕಾರ್ಯನಿರ್ವಹಣಾಧಿಕಾರಿಯಾಗಿರುವ ಶ್ರೀ ವೆಂಕಟ್ರಮಣರಾವ್ ಮಂಕುಡೆ ವಹಿಸಿ ಕ್ರೀಡಾಕೂಟ ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿ ಅಧ್ಯಕ್ಷೀಯ ನುಡಿಗಳನ್ನಾಡಿದರು.ಕ್ರೀಡಾಕೂಟಕ್ಕೆ ಚಾಲನೆಯನ್ನು ನೀಡಿದ ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಕಡಬ ವಲಯದ ಪ್ರೌಢಶಾಲಾ ವಿಭಾಗದ ನೋಡೆಲ್ ಅಧಿಕಾರಿಗಳಾದ ಶ್ರೀ ಲೋಕೇಶ್ ಟಿ ಎಸ್ ವಿದ್ಯಾರ್ಥಿಗಳು […]
ವಿಸಿಇಟಿಗೆ ಎನ್‍ಬಿಎ ಮಾನ್ಯತೆ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮತ್ತು ಸಿವಿಲ್ ಇಂಜಿನಿಯರಿಂಗ್ ವಿಭಾಗಕ್ಕೆ ರಾಷ್ಟ್ರೀಯ ಮಾನ್ಯತಾ ಮಂಡಳಿಯು (National Board of Accreditation) ಮೂರು ಶೈಕ್ಷಣಿಕ ವರ್ಷಗಳಿಗೆ ಮಾನ್ಯತೆಯನ್ನು ನೀಡಿದೆ. ಈ ಹಿಂದೆ 2019 ರಿಂದ 2022 ಹಾಗೂ 2022 ರಿಂದ 2025 ವರೆಗೆ ಎರಡು ಬಾರಿ ರಾಷ್ಟ್ರೀಯ ಮಾನ್ಯತೆ ದೊರಕಿತ್ತು, ಈಗ ಮತ್ತೆ ಮೂರು ವರ್ಷಗಳ ಕಾಲಕ್ಕೆ ಅಂದರೆ ಜನವರಿ 2026 ರಿಂದ ಡಿಸೆಂಬರ್ 2028ರ ವರೆಗೆ ಮಾನ್ಯತೆಯನ್ನು ನೀಡಲಾಗಿದೆ.ರಾಷ್ಟ್ರೀಯ […]
ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಕರಾಟೆ ಸ್ಪರ್ಧೆಯಲ್ಲಿ ಪ್ರಾಂತ ಮಟ್ಟಕ್ಕೆ ಆಯ್ಕೆ

ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಶ್ರೀ ಭಾರತೀ ವಿದ್ಯಾಸಂಸ್ಥೆ ಆಲಂಕಾರು ಇಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನಮ್ಮ ಸಂಸ್ಥೆಯ 17ರ ವಯೋಮಾನದ ಬಾಲಕರ ವಿಭಾಗದಲ್ಲಿ ಚಿಂತನ್ .ಕೆ. 10ನೇ ತರಗತಿ ಮತ್ತು ಬಾಲಕಿಯರ ವಿಭಾಗದಲ್ಲಿ ಡ್ಯಾಲಿ ಹತ್ತನೇ ತರಗತಿ ಪ್ರಥಮ ಸ್ಥಾನವನ್ನು ಪಡೆದು ಮುಂದೆ ಸೆಪ್ಟಂಬರ್ ತಿಂಗಳಲ್ಲಿ ಬೆಳಗಾಂನಲ್ಲಿ ನಡೆಯಲಿರುವ ಪ್ರಾಂತ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇದೇ ವಯೋಮಾನದ ಕೀರ್ತನ್‍ಕುಮಾರ್ ಪಿ 10ನೇ ತರಗತಿ ದ್ವಿತೀಯ ಸ್ಥಾನ, ಲೋಹಿತ್‍ಕುಮಾರ್ 9ನೇ […]
ಸರಸ್ವತೀ ವಿದ್ಯಾಲಯದಲ್ಲಿ ಪ್ರತಿಜ್ಞಾವಿಧಿ ಬೋಧನಾ ಕಾರ್ಯಕ್ರಮ

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಇಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿ ಸರಕಾರ ಮತ್ತು ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಹಾಗೂ ಪ್ರತಿಜ್ಞಾವಿಧಿ ಬೋಧನಾ ಕಾರ್ಯಕ್ರಮವು ಜೂನ್ 30ರಂದು ಕಡಬ ಹನುಮಾನ್ ನಗರದ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು ಕಾರ್ಯಕ್ರಮವನ್ನು ಪುತ್ತೂರಿನ ವಕೀಲರಾದ ಶ್ರೀ ಲತನ್ ರೈ ಗುತ್ತುಪಾಲು ದೀಪ ಬೆಳಗಿಸಿ ಉದ್ಘಾಟಿಸಿ ನಾಯಕತ್ವದಲ್ಲಿ ನಿರ್ಧಾರ ತೆಗೆದುಕೊಳ್ಳುವುದು ಪ್ರಾಮುಖ್ಯವಾಗಿದೆ. ತಂದೆ-ತಾಯಿಯನ್ನು ಪ್ರೀತಿಸಿ ,ಗೌರವಿಸಿ. ಹಿರಿಯರ ಶಿಕ್ಷಕರ ಮಾತನ್ನು ಕೇಳುವವರ ಜೀವನ ಉತ್ತಮವಾಗಿರುತ್ತದೆ. ದುಶ್ಚಟಗಳಿಂದ ದೂರ ಇರಿ ಎಂದು ವಿದ್ಯಾರ್ಥಿಗಳಿಗೆ […]
ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

ಪುತ್ತೂರು: ಜೀವನದಲ್ಲಿ ಪ್ರತಿಯೊಬ್ಬರಿಗೂ ಅವರದ್ದೇ ಆದ ಗುರಿ ಇರುತ್ತದೆ, ಅದನ್ನು ತಲುಪುವಲ್ಲಿ ಅಪಾರವಾದ ಶ್ರದ್ಧೆ ಮತ್ತು ಅವಿರತವಾದ ಶ್ರಮದ ಆವಶ್ಯಕತೆ ಇದೆ ಎಂದು ಎಸ್‍ಎಪಿ ಲ್ಯಾಬ್ ಇಂಡಿಯಾ ಇದರ ಡೆವೆಲಪ್‍ಮೆಂಟ್ ಎಕ್ಸ್‍ಪರ್ಟ್ ಹಾಗೂ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಹಿರಿಯ ವಿದ್ಯಾರ್ಥಿನಿ ನಿವೇದಿತಾ ಕಾಮತ್ ಹೇಳಿದರು.ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತಾಡಿದರು. ಸಮಾಜ ನಿಮ್ಮನ್ನು […]
ವಿವೇಕಾನಂದ ಕಾಲೇಜಿನಲ್ಲಿ ಕಲಾಸಪ್ತ-2025

ಪುತ್ತೂರು: ಸಾಮಾಜಿಕ ಜಾಲತಾಣಗಳು ಜನರ ಗಮನವನ್ನು ಬೇಗನೆ ಸೆಳೆಯುತ್ತದೆ. ಜೊತೆಗೆ ಏಕಾಗ್ರತೆಯನ್ನೂ ಕಡಿಮೆಗೊಳಿಸುತ್ತದೆ. ಜೀವನದಲ್ಲಿ ಏನನ್ನಾದರೂ ಸಾಧಿಸುವ ಹಂಬಲ ಇರುವ ಮಂದಿ, ಸಾಮಾಜಿಕ ಜಾಲತಾಣಗಳಿಂದ ದೂರವಿರಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ವಿಭಿನ್ನವಾದ, ಉತ್ತಮ ರೀತಿಯ ಕೌಶಲ್ಯವಿರುತ್ತದೆ. ಅದನ್ನು ಒಲಿಸಿಕೊಳ್ಳುವ ಮಾರ್ಗವನ್ನು ಹುಡುಕಿಕೊಳ್ಳಬೇಕು ಎಂದು ಪುತ್ತೂರಿನ ಹೆಚ್ಚುವರಿ ಸಿವಿಲ್ ಮತ್ತು ಜೆ. ಎಂ. ಎಫ್. ಸಿ ನಾಯ್ಯಾಲಯದ ನಾಯ್ಯಾಧೀಶ ಶಿವಣ್ಣ ಹೆಚ್. ಆರ್ ಮಾತನಾಡಿದರು.ಅವರು ಪುತ್ತೂರಿನ ವಿವೇಕಾನಂದ ಕಾಲೇಜಿನ ಕಲಾ ವಿಭಾಗ, ಮಾನವಿಕ ವಿಭಾಗ ಹಾಗೂ ಐಕ್ಯೂಎಸಿ ವತಿಯಿಂದ ಜರುಗಿದ […]
ಬುದ್ಧಿಯಿಂದ ಬರೆಯುವುದು ಪರೀಕ್ಷೆ, ಹೃದಯದಿಂದ ಬರೆಯುವುದು ಬದುಕು; ಡಾ. ಶ್ರೀಶ ಕುಮಾರ

ಪುತ್ತೂರು; ವಿವೇಕಾನಂದರು ಬದುಕುವ ಬದುಕಿಸುವ ದಾರಿ ತೋರಿಸಿಕೊಟ್ಟವರು. ಏಕವಚನದ ಕಡೆಯಿಂದ ಬಹುವಚನದ ಕಡೆಗೆ ನಾವು ಸಾಗಬೇಕಿದೆ. ಬುದ್ಧಿಯಿಂದ ಬರೆಯುವುದು ಪರೀಕ್ಷೆ, ಹೃದಯದಿಂದ ಬರೆಯುವುದು ಬದುಕು. ಜಗತ್ತೇ ನನ್ನ ಮನೆ ಎಂದು ಬದುಕಿದಾಗ, ವಸುಧೈವ ಕುಟುಂಬಕಂ ಎನ್ನುವುದು ಸಾಕಾರಗೊಳ್ಳುತ್ತದೆ ಎಂದು ಕಾಲೇಜಿನ ಸಂಸ್ಕøತ ವಿಭಾಗದ ಮುಖ್ಯಸ್ಥ ಡಾ. ಶ್ರೀಶ ಕುಮಾರ ಹೇಳಿದರು.ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ ವಿವೇಕಾನಂದ ಸಂಶೋಧನಾ ಕೇಂದ್ರ ಮತ್ತು ಐಕ್ಯೂಎಸಿ ಘಟಕದ ಸಂಯೋಜನೆಯಲ್ಲಿ […]
ವಿವೇಕಾನಂದ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಿಂದ ಉತ್ಕರ್ಷ ಕಾರ್ಯಕ್ರಮ

ಪುತ್ತೂರು; ವೃದ್ಧರಿಗೂ ಉತ್ಸಾಹ ತುಂಬುವಂತಹಾ ಕಾರ್ಯತತ್ಪರತೆ ಯುವಕರಲ್ಲಿರಬೇಕು. ಬಂಗಾರದಂತಹ ವಿದ್ಯಾರ್ಥಿ ಜೀವನದಲ್ಲಿ ಸಾಗುವ ದಾರಿ ಒಳಿತಿನ ಕಡೆಗೆ ಇರಬೇಕು. ಅಧ್ಯಾಪಕರಿಗೆ ಹಾಗೂ ಪೋಷಕರಿಗೆ ಮೋಸ ಮಾಡಕೂಡದು. ಜೀವನದ ಅನುಭವ ಎಂದಿಗೂ ಮೇಲು ” ಎಂದು ರೈತಬಂಧು ಆಹಾರೋದ್ಯಮ ಪ್ರೈವೆಡ್ ಲಿಮಿಟೆಡ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಶಿವಶಂಕರ್ ನಾಯಕ್ ನುಡಿದರು.ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ ( ಸ್ವಾಯತ್ತ ) ಇಲ್ಲಿ ವಾಣಿಜ್ಯ ವಿಭಾಗ, ವಾಣಿಜ್ಯ ಸಂಘ ಹಾಗೂ ಐಕ್ಯೂಎಸಿಯ ಸಹಯೋಗದಲ್ಲಿ ನಡೆದ ‘ ಉತ್ಕರ್ಷ […]
ವಿವೇಕಾನಂದ ಕಾಲೇಜಿನಲ್ಲಿ ಭಾಷಾ ಕಾರ್ಯಾಗಾರದ ಉದ್ಘಾಟನೆ

ಭಾಷಾ ಶಿಕ್ಷಕರು ವಿದ್ಯಾರ್ಥಿಗಳಿಗೆ ಹಲವಾರು ಚಟುವಟಿಕೆಗಳನ್ನು ನೀಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಾಯ ಮಾಡಬೇಕು. ಪರೀಕ್ಷೆಗಳ ಚಟುವಟಿಕೆಗಳು ಕೂಡಾ ವಿದ್ಯಾರ್ಥಿಗಳಿಗೆ ಅಗತ್ಯ. ಭಾಷಾ ಶಿಕ್ಷಕರೇ ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರವನ್ನು ಕಲಿಸುವ ಮೂಲಕ ಉತ್ತಮ ನಾಗರಿಕರನ್ನು ಹುಟ್ಟುಹಾಕಬೇಕು. ಭಾರತದಲ್ಲಿರುವ ವೈವಿಧ್ಯಯ ಸಂಸ್ಕøತಿಯ ಜನರ ನಡುವೆ ಏಕತೆಯನ್ನು ಬೆಳೆಸುವ ಜವಾಬ್ದಾರಿ ಭಾಷಾ ಶಿಕ್ಷಕರ ಮೇಲಿದೆ ಎಂದು ಮೈಸೂರಿನ ಭಾರತೀಯ ಭಾಷಾ ಸಂಸ್ಥಾನದ ಸಹಾಯಕ ನಿರ್ದೇಶಕ ಡಾ.ಪಂಕಜ್ ದ್ವಿವೇದಿ ಹೇಳಿದರು.ಅವರು ವಿವೇಕಾನಂದ ಕಲಾ,ವಾಣಿಜ್ಯ ಮತ್ತು ವಿಜ್ನಾನ (ಸ್ವಾಯತ್ತ) ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಪರೀಕ್ಷಣ […]
ಭಾರತೀಯ ಜ್ಞಾನ ಪರಂಪರೆ ಪರಿಚಯ ಮತ್ತು ಅವಲೋಕನ

ಪುತ್ತೂರು: ಭಾರತೀಯ ಜ್ಞಾನ ಪರಂಪರೆಯು ಅತ್ಯಂತ ಹೆಚ್ಚು ಅವಜ್ಞೆಗೊಳಗಾಗಿದೆ ಮತ್ತು ನಮ್ಮವರಿಂದಲೇ ನಿರಾಕರಿಸಲ್ಪಟ್ಟಿದೆ. ಅಧರ್ಮವನ್ನು ಧರ್ಮ ಎಂದು ಬಿಂಬಿಸುವ ಕೆಲಸಗಳು ನಡೆಯುತ್ತಿವೆೆ. ಇದರಿಂದಾಗಿ ನಾವು ಕಳೆದುಕೊಂಡದ್ದು ಅಪಾರ ಎಂದು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಕಾರ್ಯನಿರ್ವಹಣಾಧಿಕಾರಿ ಹಾಗೂ ಶ್ರೀರಾಮ ಪದವಿ ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ್.ಕೆ.ಎನ್ ಹೇಳಿದರು ಅವರು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘ ಮತ್ತು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಭಾರತೀಯ ಜ್ಞಾನ ಪರಂಪರೆ ಪರಿಚಯ ಮತ್ತು ಅವಲೋಕನ ಎನ್ನುವ […]
ಕಾರ್ಮಿಕ ಭವಿಷ್ಯ ನಿಧಿ ಮತ್ತು ರಾಜ್ಯಕಾರ್ಮಿಕರ ವಿಮಾ ಯೋಜನೆಯ ಬಗ್ಗೆ ಮಾಹಿತಿಕಾರ್ಯಾಗಾರ

ಪುತ್ತೂರು: ಕಾರ್ಮಿಕ ಭವಿಷ್ಯ ನಿಧಿ ಮತ್ತು ರಾಜ್ಯ ಕಾರ್ಮಿಕರ ವಿಮಾ ಯೋಜನೆಯ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಯ ಶ್ರೀ ರಾಮ ಸಭಾಭವನದಲ್ಲಿ ಏರ್ಪಡಿಸಲಾಗಿತ್ತು. ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ) ಇದರ ಆಶ್ರಯದಲ್ಲಿ ಕಾರ್ಮಿಕ ಭವಿಷ್ಯ ನಿಧಿ ಮಂಗಳೂರುವಿಭಾಗದ ಜಿಲ್ಲಾ ಸಂಪರ್ಕ ಅಭಿಯಾನದ ಅಡಿಯಲ್ಲಿ ನಿಧಿ ಆಪ್ ಕೇನಿಕಟ್ ಎನ್ನುವ ಕಾರ್ಯಕ್ರಮದನ್ವಯ ಇದನ್ನುಆಯೋಜಿಸಲಾಗಿತ್ತು. ಕಾರ್ಮಿಕ ಭವಿಷ್ಯ ನಿಧಿಗೆ ಸಂಬಂಧಪಟ್ಟಂತೆ ಎಲ್ಲಾ ವಿವರಗಳನ್ನು ಮತ್ತು ಕಾಲಕಾಲಕ್ಕೆಬದಲಾದ ನಿಯಮಗಳ ಬಗ್ಗೆ ಮಾಹಿತಿ ನೀಡಲಾಯಿತು. […]
ವಿವೇಕಾನಂದ ಪಾಲಿಟೆಕ್ನಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾವೇಶ

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ ಹಿರಿಯ ವಿದ್ಯಾರ್ಥಿಗಳ ಸಮಾವೇಶವನ್ನು ಆಯೋಜಿಸಲಾಯಿತು. ಭಾರತ ಮಾತೆಗೆ ಪುಷ್ಪಾರ್ಚನೆಗೈದು ಪ್ರಾರಂಭಗೊಂಡ ಈ ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಅರುಣ್ ಕುಮಾರ್ ರೈ ಪ್ರಧಾನ ಕಾರ್ಯದರ್ಶಿಯಾದ ಅಜೇಯ ಪೈ, ಆಡಳಿತ ಮಂಡಳಿಯ ಅಧ್ಯಕ್ಷರಾದ ವಿಶ್ವೇಶ್ವರ ಭಟ್ ಬಂಗಾರಡ್ಕ, ಸಂಚಾಲಕರಾದ ಮಹಾದೇವ ಶಾಸ್ತ್ರಿ ಮಣಿಲ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಡಳಿತ ಮಂಡಳಿಯ ಸದಸ್ಯರಾದ ರವಿ ಮುಂಗ್ಲಿ ಮನೆ ಸದಸ್ಯರಾದ ಈಶ್ವರ ಚಂದ್ರ, ಪ್ರಾಂಶುಪಾಲರಾದ ಮುರಳೀಧರ್ ಯಸ್ ಅನೇಕ […]