ದೇಶವೇ ಪ್ರಥಮ ಆದ್ಯತೆಯಾಗಿರಲಿ-ಡಾ. ಕಲ್ಲಡ್ಕ ಪ್ರಭಾಕರ ಭಟ್

ಪುತ್ತೂರು: ರಾಮನನ್ನು ನಾವು ಸದಾ ನೆನಪಿಡಬೇಕಾದ ಅಗತ್ಯವಿದೆ. ಎಲ್ಲಾ ರೀತಿಯಿಂದ ನೋಡಿದಾಗಲೂ ರಾಮ ನಮಗೆ ಆದರ್ಶವಾಗಿ ಕಾಣುತ್ತಾನೆ. ಹಿಂದೂಗಳು ಸ್ವಧರ್ಮದ ಬಗ್ಗೆ ಅಭಿಮಾನವನ್ನು ಎಂದಿಗೂ ಹೊಂದಿರಬೇಕು. ವಿದೇಶೀಯರು ಕೂಡಾ ಇಲ್ಲಿನ ಧಾರ್ಮಿಕ, ಆಧ್ಯಾತ್ಮಿಕ ವಿಚಾರಗಳಿಂದ ಆಕರ್ಷಿತರಾಗಿ ಭಾರತಕ್ಕೆ ಬರುತ್ತಿದ್ದಾರೆ. ಹಾಗಿದ್ದಾಗ ನಾವು ನಮಗೆ ನೆಲೆ ಕಲ್ಪಿಸಿದ ದೇಶದ ಅಭಿವೃದ್ಧಿಗಾಗಿ ಪಣತೊಡಬೇಕು. ಹಾಗೆಯೇ ನಮ್ಮ ದೇಶವೇ ನಮಗೆ ಮೊದಲ ಆದ್ಯತೆಯಾಗಲಿ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ನುಡಿದರು.ಇವರು ಪುತ್ತೂರಿನ ಕಲಾ, […]
ವಿವೇಕಾನಂದ ಕಾಲೇಜಿನಲ್ಲಿ ಶಿವಾಜಿ ಜೀವನ ಚರಿತ್ರೆ ವಿಚಾರ ಸಂಕಿರಣ

ಪುತ್ತೂರು, ಫೆ. 20: ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ನಿರ್ಮಿಸಲಾರ. ಅಂತೆಯೇ ಚರಿತ್ರೆಯನ್ನು ಓದದವನು ಚರಿತ್ರೆಯ ಬಗ್ಗೆ ಹೇಳಲು ಅರ್ಹನಲ್ಲ. ಭಾರತದದುದ್ದಕ್ಕೂ ಶಿವಾಜಿಯನ್ನು ಪೆÇೀಜಿಸುವವರೇ ಹೆಚ್ಚು. ಭಾರತದ ಮೇಲೆ ಬಹಳಷ್ಟು ಯುದ್ಧಗಳಾಗಿವೆ. ಅವೆಲ್ಲವನ್ನು ಚಾಕಚಕ್ಯತೆಯಿಂದ ಸರಿಪಡಿಸಿಕೊಂಡು ಹೋದವರು ಶಿವಾಜಿ ಮಹಾರಾಜ್. ಶಿವಾಜಿ ಭಾರತಕ್ಕೆ ಮಾತ್ರ ಸೀಮಿತವಲ್ಲದೇ, ಇಡೀ ಪ್ರಪಂಚವೇ ಅವರನ್ನು ತಿಳಿದಿದೆ. ಶಿವಾಜಿಯ ಧ್ಯೇಯ, ಆತ್ಮ ವಿಶ್ವಾಸವನ್ನು ನಮ್ಮಲ್ಲಿ ಅಳವಡಿಸಿಕೊಳ್ಳುವುದರ ಜೊತೆಗೆ, ಶಿವಾಜಿ ಅಂತರ್ ಶಕ್ತಿ ಹಾಗೂ ಶ್ರದ್ಧೆ ನಮ್ಮೆಲ್ಲರಲ್ಲೂ ಮೂಡಬೇಕು ಎಂದು ವಿವೇಕಾನಂದ ಸ್ನಾತಕೋತ್ತರ ವಿಭಾಗದ ಡೀನ್ […]
ವಿವೇಕಾನಂದ ಕಾಲೇಜಿನಲ್ಲಿ ವೀರ ರಾಣಿ ಅಬ್ಬಕ್ಕ- ರಾಷ್ಟ್ರೀಯ ವಿಚಾರ ಸಂಕಿರಣ

ಪುತ್ತೂರು, ಫೆ 16: ನಾವು ಅಗತ್ಯವಾಗಿ ತಿಳಿಯಬೇಕಿದ್ದ ಹಾಗೂ ಯುವ ಜನಾಂಗ ಅರಿಯಬೇಕಾದ ಚರಿತ್ರೆಯನ್ನು ಮರೆಯಾಗಿಸಿದ್ದು ವಿಪರ್ಯಾಸ. ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೂ ಮೊದಲೇ ಪರಕೀಯರ ವಿರುದ್ಧ ಕೆಚ್ಚೆದೆಯ ಹೋರಾಟ ಪ್ರಾರಂಭಿಸಿದವಳು ಅಬ್ಬಕ್ಕ. ತಾನು ಒಬ್ಬನೇ ನಿಂತು ಬ್ರಿಟೀಷರಿಗೆ ಸವಾಲೆಸೆದ ಕಿತ್ತೂರು ಚೆನ್ನಮ್ಮನಂಥವರ ಉದಾಹರಣೆಯನ್ನು ನಾವು ಗಮನಿಸಬಹುದು.ನಮ್ಮ ಬದುಕಿಗೆ ಪ್ರೇರಣೆಯಾಗಬಲ್ಲ ನಮ್ಮ ಚರಿತ್ರೆಯನ್ನು ನಾವು ಅಗತ್ಯವಾಗಿ ತಿಳಿಯಬೇಕು ಎಂದು ಕೇಂದ್ರ ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ಯಮಗಳ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.ಇವರು ಪುತ್ತೂರಿನ ವಿವೇಕಾನಂದ ಕಲಾ,ವಿಜ್ಞಾನ,ವಾಣಿಜ್ಯ ಮಹಾವಿದ್ಯಾಲಯ […]

ವಿವೇಕಾನಂದ ಕಾಲೇಜಿನಲ್ಲಿ ವಿವೇಕಾನಂದ ಜಯಂತಿ20 ಸಾವಿರ ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ಸಮೂಹ ಗಾಯನ ಪುತ್ತೂರು, ಜ.12; ಭಾರತದ ಆತ್ಮವಾದ ಧರ್ಮ, ಸಂಸ್ಕøತಿಯನ್ನು ಜಗತ್ತಿನೆಲ್ಲೆಡೆ ಸಾರಿದ ಮಹಾನುಭಾವರು ಸ್ವಾಮಿ ವಿವೇಕಾನಂದರು. ಧರ್ಮವನ್ನೇ ತಳಹದಿಯಾಗಿರಿಸಿ, ಸಮಾಜ ಸುಧಾರಣೆ ಮಾಡಿದರು. ಅವರ ಕನಸಿನಂತೆ ಇಂದಿನ ತಲೆಮಾರು ಬದಲಾಗುತ್ತಿದೆ. ದೀರ್ಘಕಾಲದ ನಿದ್ದೆಯ ಬಳಿಕ ತಾಯಿ ಭಾರತಿ ಎಚ್ಚೆತ್ತುಕೊಳ್ಳುತ್ತಿದ್ದಾಳೆ. ಭಾರತ ಎಲ್ಲಾ ರಂಗದಲ್ಲೂ ಕೀರ್ತಿ ಪಸರಿಸುತ್ತಿದೆ ಎಂದು ಹಿಂದೂ ಜಾಗರಣ ವೇದಿಕೆ, ಕರ್ನಾಟಕ ದಕ್ಷಿಣ ಪ್ರಾಂತ ಪ್ರಮುಖ್ ಶ್ರೀಕಾಂತ್ ಶೆಟ್ಟಿ ಕಾರ್ಕಳ ಹೇಳಿದರು.ಅವರು ಪುತ್ತೂರಿನ ವಿವೇಕಾನಂದ […]
ಶೈಕ್ಷಣಿಕ ವರ್ಷದ ಪ್ರಥಮ ವರ್ಷದ ವಿದ್ಯಾರ್ಥಿಗಳ ಹೆತ್ತವರ ಮತು ಪೋಷಕರ ಸಭೆ

ಪುತ್ತೂರು: ಕಾಲೇಜಿನಲ್ಲಿ ಕಲಿಯುತ್ತಿರುವ ನಿಮ್ಮ ಮಕ್ಕಳ ಶೈಕ್ಷಣಿಕ ಅಭಿವೃದ್ದಿಯನ್ನು ತಿಳಿದು ಕೊಳ್ಳುವುದಕ್ಕಾಗಿ ಹೆತ್ತವರು ಅಥವಾ ಪೋಷಕರ ನಿಯಮಿತವಾಗಿ ಕಾಲೇಜಿನ ಸಂಪರ್ಕದಲ್ಲಿರುವುದು ಆವಶ್ಯಕ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಹೇಳಿದರು.ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೂಲವಿಜ್ಞಾನ ವಿಭಾಗ ಮತ್ತು ಪೇರೆಂಟ್ ರಿಲೇಶನ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಸಾವರ್ಕರ್ ಸಭಾಭವನದಲ್ಲಿ ನಡೆದ ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರಥಮ ವರ್ಷದ ವಿದ್ಯಾರ್ಥಿಗಳ ಹೆತ್ತವರ […]
ಪುರುಷರ ವಾಲಿಬಾಲ್‍ನಲ್ಲಿ ವಿಟಿಯು ತಂಡಕ್ಕೆ ಆಯ್ಕೆ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ತೃತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿ ಅಖಿಲೇಶ್ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಪುರುಷರ ವಾಲಿಬಾಲ್ ತಂಡಕ್ಕೆ ಆಯ್ಕೆಗೊಂಡಿದ್ದಾರೆ.ಆಂಧ್ರಪ್ರದೇಶÀ ಕಾಕಿನಾಡದ ಜವಾಹರಲಾಲ್ ನೆಹರು ತಾಂತ್ರಿಕ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಡಿಸೆಂಬರ್ 10 ರಿಂದ 14ರ ವರೆಗೆ ನಡೆಯುವ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಪುರುಷರ ವಾಲಿಬಾಲ್ ಚಾಂಪಿಯನ್‍ಶಿಪ್ 2025-26 ರಲ್ಲಿ ಇವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸುತ್ತಾರೆ.ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು […]
ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನದ ರಥಯಾತ್ರೆ ಜನಜಾಗೃತಿ ಕಾರ್ಯಕ್ರಮ

ಪುತ್ತೂರು :ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನದ ರಥ ಯಾತ್ರೆ ಜನಜಾಗೃತಿ ಕಾರ್ಯಕ್ರಮದ ಸಂದರ್ಭದಲ್ಲಿ ಆಗಮಿಸಿದ ರಥವನ್ನು ಕಾಲೇಜಿನ ಆಡಳಿತ ಮಂಡಳಿ, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ನಡೆಸಿದ ಸಭಾ ಕಾರ್ಯಕ್ರಮದಲ್ಲಿ ಅತಿಥಿಗಳು ಭಾರತ ಮಾತೆಗೆ ಪುಷ್ಪಾರ್ಚನೆ ಸಲ್ಲಿಸಿದರು. ಬೆಂಗಳೂರಿನ ಪರಿವರ್ತನಾ ಸೇವಾ ಟ್ರಸ್ಟ್ ನ ಸಂಯೋಜಕರಾದ ಸಂದೇಶ್ ರವರು ತಮ್ಮ ಅತಿಥೇಯ ಮಾತುಗಳನ್ನಾಡುವ ಸಂದರ್ಭದಲ್ಲಿ “ಯುವ ಸಮುದಾಯ ಮಾದಕ ವ್ಯಸನದಿಂದ ಮುಕ್ತವಾಗಬೇಕು ಎಂಬ ಆಶಯದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತೇವೆ. ಮಾದಕ ವ್ಯಸನದಿಂದ ಸಿಗುವ ಕ್ಷಣಿಕ […]
ವಿಸಿಇಟಿಗೆ ಎನ್‍ಬಿಎ ಮಾನ್ಯತೆ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮತ್ತು ಸಿವಿಲ್ ಇಂಜಿನಿಯರಿಂಗ್ ವಿಭಾಗಕ್ಕೆ ರಾಷ್ಟ್ರೀಯ ಮಾನ್ಯತಾ ಮಂಡಳಿಯು (National Board of Accreditation) ಮೂರು ಶೈಕ್ಷಣಿಕ ವರ್ಷಗಳಿಗೆ ಮಾನ್ಯತೆಯನ್ನು ನೀಡಿದೆ. ಈ ಹಿಂದೆ 2019 ರಿಂದ 2022 ಹಾಗೂ 2022 ರಿಂದ 2025 ವರೆಗೆ ಎರಡು ಬಾರಿ ರಾಷ್ಟ್ರೀಯ ಮಾನ್ಯತೆ ದೊರಕಿತ್ತು, ಈಗ ಮತ್ತೆ ಮೂರು ವರ್ಷಗಳ ಕಾಲಕ್ಕೆ ಅಂದರೆ ಜನವರಿ 2026 ರಿಂದ ಡಿಸೆಂಬರ್ 2028ರ ವರೆಗೆ ಮಾನ್ಯತೆಯನ್ನು ನೀಡಲಾಗಿದೆ.ರಾಷ್ಟ್ರೀಯ […]
ಸಪ್ತಶಕ್ತಿ ಸಂಗಮ ಕಾರ್ಯಕ್ರಮಕಡಬ ತಾಲೂಕು ದಕ್ಷಿಣ ಕನ್ನಡ ಜಿಲ್ಲೆ

ದಿನಾಂಕ 3.1.2026 ರಂದು ಶನಿವಾರ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ, ಹನುಮಾನ್ ನಗರ, ಕಡಬದಲ್ಲಿ ಸಪ್ತಶಕ್ತಿ ಸಂಗಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಮಾತೆಯರನ್ನು ಆರತಿ ಬೆಳಗಿ , ಅರಿಶಿನ , ಕುಂಕುಮ ಬೆಲ್ಲ ನೀರನ್ನು ಕೊಟ್ಟು ಸತ್ಕರಿಸುವ ಮೂಲಕ ಈ ಕಾರ್ಯಕ್ರಮಕ್ಕೆ ಬರಮಾಡಿಕೊಳ್ಳಲಾಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳು ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತದನಂತರ ವಿದ್ಯಾರ್ಥಿಗಳಿಂದ ಸರಸ್ವತಿ ವಂದನಾ ನಡೆಯಿತು. ಕಾರ್ಯಕ್ರಮದಲ್ಲಿ ದೇಶಭಕ್ತಿ ಗೀತೆಯನ್ನು ನೆರೆದಿದ್ದ ಮಾತೆಯರಿಗೆ ಮಾತಾಜಿ ಶ್ರೀಮತಿ ಪವಿತ್ರ ಎನ್ ರೈ ಇವರು […]
ವಿವೇಕಾನಂದ ಪಾಲಿಟೆಕ್ನಿಕ್‍ನಲ್ಲಿ ಎರಡು ಹೊಸ ಕೋರ್ಸ್‍ಗಳ ಸೇರ್ಪಡೆಗೆ ಪರಿವೀಕ್ಷಣಾ ತಂಡದ ಭೇಟಿ

ಪುತ್ತೂರು ; ವಿವೇಕಾನಂದ ಪಾಲಿಟೆಕ್ನಿಕ್‍ನಲ್ಲಿ 2026-27ರ ಶೈಕ್ಷಣಿಕ ವರ್ಷಕ್ಕೆAICTE ನವದೆಹಲಿಯಿಂದ ಶಿಫಾರಸುಗೊಂಡ ಎರಡು ಹೊಸ ಕೋರ್ಸ್‍ಗಳಾದArtificial Intelligence & Machine Learning (AIML) ಹಾಗೂ “Automation & Robotics (AR)” ನ ಸೇರ್ಪಡೆಗಾಗಿ ತಾಂತ್ರಿಕ ಶಿಕ್ಷಣಮಂಡಳಿಯಿಂದ ಸ್ಥಳ ಪರಿಶೀಲನೆ ಹಾಗೂ ಮೂಲಭೂತ ಸೌಕರ್ಯಗಳ ಮಾಹಿತಿ ಪಡೆಯುವುದಕ್ಕೋಸ್ಕರ ತಾಂತ್ರಿಕ ಶಿಕ್ಷಣ ಮಂಡಳಿ ಬೆಂಗಳೂರಿನ ಉಪನಿರ್ದೇಶಕರಾದ ಡಾ| ವೈ. ಎನ್ ದೊಡ್ಡಮನಿ ಹಾಗೂ ಮೋಹನ್ ರಾಜ್ ವಿಭಾಗಾಧಿಕಾರಿ , ಸಿವಿಲ್ ವಿಭಾಗ ಸರಕಾರಿ ಪಾಲಿಟೆಕ್ನಿಕ್ ಬಂಟ್ವಾಳ ಇವರ ತಂಡ ಕಾಲೇಜಿಗೆ […]
ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ: ಪೋಷಕರ ಸಭೆ

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ ಇದರ ಪ್ರಸಕ್ತ ಶೈಕ್ಷಣಿಕ ವರ್ಷದ ಪೋಷಕರ ಸಭೆಯು ಸಂಸ್ಥೆಯ ಅಧ್ಯಕ್ಷರಾದ ಶ್ರೀ ರವಿರಾಜ್ ಶೆಟ್ಟಿ ಕಡಬ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕøತ ಶ್ರೀ ಟಿ. ನಾರಾಯಣ ಭಟ್ ರಾಮಕುಂಜ ಆಗಮಿಸಿ ಪೋಷಕರ ಸಂಸ್ಕಾರ ಬದುಕಿನ ಕುರಿತು ಮಾರ್ಗದರ್ಶನವನ್ನು ನೀಡಿದರು. ಸಭೆಯಲ್ಲಿ ಪೆÇೀಷಕರು ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. ವೇದಿಕೆಯಲ್ಲಿ ಆಡಳಿತ ಮಂಡಳಿಯ ಕೋಶಾಧಿಕಾರಿಗಳಾದ ಶ್ರೀ ಲಿಂಗಪ್ಪ. ಜೆ, ಮುಖ್ಯ ಶಿಕ್ಷಕಿ […]
ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಪುತ್ತೂರು : ಕೋಡ್ ಕ್ರಾಫ್ಟ್ ವಿಜ್ಞಾನ ಮೇಳ

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ ಇಲ್ಲಿ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಇವರ ವತಿಯಿಂದ ಕೋಡ್ ಕ್ರಾಫ್ಟ್ ವಿಜ್ಞಾನ ಮೇಳದಲ್ಲಿ ಉತ್ತಮ ಬದುಕಿಗೆ ವಿಜ್ಞಾನ ವಿಷಯದಲ್ಲಿ ವಿಜ್ಞಾನ ಕಾರ್ಯರೂಪ ಮಾದರಿ ಪ್ರದರ್ಶನ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ಆಗಸ್ಟ್ 6ರಂದು ಸಂಸ್ಥೆಯ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಸ್ವತೀ ವಿದ್ಯಾಲಯದ ಕೋಶಾಧಿಕಾರಿ ಶ್ರೀ ಲಿಂಗಪ್ಪ .ಜೆ ವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್‍ನ ಪ್ರಾಜೆಕ್ಟ್ ಮ್ಯಾನೇಜರ್ ಶ್ರೀ ಹೇಮಂತ್ ಇವರು ಕೋಡ್ ಕ್ರಾಫ್ಟ್ […]