ವಿವೇಕ ಜಯಂತಿ ಆಚರಣೆ-2025 ಗುರುವಿನಿಂದ ಪಡೆದ ಉತ್ಕೃಷ್ಟ ವಿಚಾರಗಳ ಚೈತನ್ಯ ರೂಪ ಶಿಷ್ಯರು – ಡಾ. ಜಿ.ಬಿ ಹರೀಶ್.

ಪುತ್ತೂರು, ಜನವರಿ ೧೩ :” ಶಿಷ್ಯರನ್ನು ಉತ್ತಮ ವಿಚಾರಗಳಿಂದ ರೂಪಿಸಬೇಕೆಂಬ ಹಂಬಲ ಗುರುವಿಗೆ ಇರುತ್ತದೆ. ಶಿಷ್ಯರಾದವರು ಸಮಾಜಕ್ಕೆ ತೆರೆದುಕೊಳ್ಳುವ ಪ್ರಕ್ರಿಯೆ ಗುರುವಿನ ಆಧ್ಯಾತ್ಮಿಕ ಗರ್ಭದಿಂದ ಪ್ರಸೂತಿ ಆದಂತೆ. ರಾಮಕೃಷ್ಣ ಪರಮಹಂಸರ ನೆರಳಿನಲ್ಲಿ ವಿವೇಕಾನಂದರು ಜಗದಗಲ ಹೆಸರಾಗುವಂತೆ ಬೆಳೆದರು. ಸ್ವದೇಶಿಯತೆಯನ್ನು ಜಾಗೃತಗೊಳಿಸಿ ಎಲ್ಲರನ್ನೂ ಒಳಿತಿನತ್ತ ಸಾಗುವಂತೆ ಪ್ರೇರಣೆಯಾಗಿದ್ದವರು ವಿವೇಕಾನಂದರು. ಸದಾ ಭಾರತದ ಒಳಿತನ್ನು ಬಯಸುತ್ತಿದ್ದ ಸ್ವಾಮಿ ವಿವೇಕಾನಂದರು ಅವರ ಬಳಿ ಬಂದವರನ್ನು ದೇಶಭಕ್ತರನ್ನಾಗಿ ಪರಿವರ್ತನೆ ಮಾಡುತ್ತಿದ್ದರು. ಹಿಂದುತ್ವಕ್ಕೆ ಹೊಸ ದಿಕ್ಕು ಇವರಿಂದ ದೊರಕಿತು ಎಂದು ಬೆಂಗಳೂರಿನ ವಂದೇಮಾತರ0 ಪಾಠ […]

ವೀರಸಾವರ್ಕರ್ ಹೋರಾಟದ ಹಾದಿ ಯುವ ಜನತೆಗೆ ಮಾದರಿಯಾಗಲಿ: ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿಕಸಿತ ಭಾರತ – ವೀರ ಸಾವರ್ಕರ್ ಕಾರ್ಯಕ್ರಮದಲ್ಲಿ ಡಾ. ಕಲ್ಲಡ್ಕ ಪ್ರಭಾಕರ್ ಭಟ್

ವೀರಸಾವರ್ಕರ್ ಹೋರಾಟದ ಹಾದಿ ಯುವ ಜನತೆಗೆ ಮಾದರಿಯಾಗಲಿ

ಇತಿಹಾಸದ ಪುಟಗಳನ್ನು ತಿರುವಿ ಹಾಕಿದರೆ, ಈ ದೇಶದ ಮೇಲೆ ಸಾಕಷ್ಟು ಪ್ರಹಾರಗಳು ನಡೆದಿರುವುದು ಗೋಚರಿಸುತ್ತದೆ. ಕಳೆದುಕೊಂಡ ಸ್ವಾತಂತ್ರ್ಯವನ್ನು ಪುನರ್ ಸ್ಥಾಪಿಸುವುದಕ್ಕಾಗಿ ಸಾಕಷ್ಟು ಮಂದಿ ವೀರ ಹೋರಾಟಗಾರರು ಈ ನೆಲದಲ್ಲಿ ಜನ್ಮವೆತ್ತಿ ಬಂದಿರುವುದು ತಿಳಿದಿದ್ದೇವೆ. ಅಂತವರಲ್ಲಿ ವೀರ ಸಾವರ್ಕರ್ ಅವರ ಹೋರಾಟ ಅತ್ಯಂತ ಗಮನಾರ್ಹವಾದದು. ಸ್ವಂತಕ್ಕಾಗಿ ಬದುಕನ್ನು ಕಟ್ಟಿಕೊಳ್ಳದೆ, ಸಂಪೂರ್ಣವಾಗಿ ದೇಶಕ್ಕಾಗಿ ಬದುಕಿದವರು ಸಾವರ್ಕರ್. ಬಲವಾದ ಧೈಯ, ಚಿಂತನೆ, ತಾಯಿ ಭಾರತಿಗೋಸ್ಕರ ಬದುಕಬೇಕೆನ್ನುವ ಹಂಬಲ ಸಾವರ್ಕರ್ ಅವರನ್ನು ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಳ್ಳುವಂತೆ ಮಾಡಿತು. ದೇಶದಲ್ಲಿ ಚಾಲ್ತಿಯಲ್ಲಿದ್ದ ವಿದೇಶಿ ವಸ್ತುಗಳನ್ನು […]

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಲಾ ಸಂಘದ ಸಮಾರೋಪ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಲಾ ಸಂಘದ ಸಮಾರೋಪ

ವಿದ್ಯಾಭ್ಯಾಸದ ಹಂತದಲ್ಲಿ ಬೇರೆ ಬೇರೆ ಚಟುವಟಿಕೆಗಳಲ್ಲಿ ನಾವು ಹೇಗೆ ತೊಡಗಿಸಿಕೊಂಡಿದ್ದೇವೆ ಎಂಬುದರ ಆಧಾರದ ಮೇಲೆ ನಮ್ಮ ಭವಿಷ್ಯದ ದಿನಗಳು ನಿಂತಿರುತ್ತವೆ ಎಂದು ವಿವೇಕಾನಂದ ಮಹಾವಿದ್ಯಾಲಯದ ವ್ಯವಹಾರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಅನ್ನಪೂರ್ಣ ಪಿ.ಜಿ ಹೇಳಿದರು. ಅವರು ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ನಡೆದ ಕಲಾಸಂಘದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ನಿರ್ದೇಶಕ ಡಾ. ಕೆ ಎನ್ ಸುಬ್ರಹ್ಮಣ್ಯ ಅವರು ಮಾತನಾಡುತ್ತಾ, ಇಂದಿನ ಕಾಲಘಟ್ಟದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ […]

ರಾಷ್ಟ್ರೀಯ ಶಿಕ್ಷಣ ನೀತಿ 2020 – ಮಾಹಿತಿ ಕಾರ್ಯಾಗಾರ

ನೀತಿಯನ್ನು ಹೆಮ್ಮೆ ಮತ್ತು ಗರ್ವದಿಂದ ಸ್ವೀಕರಿಸಲು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಪಿ. ಎಸ್. ಯಡಪಡಿತ್ತಾಯ ಕರೆ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ) ವತಿಯಿಂದ ಕೇಂದ್ರ ಸರ್ಕಾರ ನೂತನವಾಗಿ ಜಾರಿಗೆ ತರುತ್ತಿರುವ “ರಾಷ್ಟ್ರೀಯ ಶಿಕ್ಷಣ ನೀತಿ – 2020” ಕುರಿತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಾಗೂ ವಿದ್ಯಾ ಭಾರತಿ ಸಹಯೋಗದೊಂದಿಗೆ ಸೆಪ್ಟೆಂಬರ್ 26 ರಂದು ವಿವೇಕಾನಂದ ಪದವಿ ಕಾಲೇಜಿನ ಸುವರ್ಣಮಹೋತ್ಸವ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. […]