ವೀರಸಾವರ್ಕರ್ ಹೋರಾಟದ ಹಾದಿ ಯುವ ಜನತೆಗೆ ಮಾದರಿಯಾಗಲಿ: ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿಕಸಿತ ಭಾರತ – ವೀರ ಸಾವರ್ಕರ್ ಕಾರ್ಯಕ್ರಮದಲ್ಲಿ ಡಾ. ಕಲ್ಲಡ್ಕ ಪ್ರಭಾಕರ್ ಭಟ್

ವೀರಸಾವರ್ಕರ್ ಹೋರಾಟದ ಹಾದಿ ಯುವ ಜನತೆಗೆ ಮಾದರಿಯಾಗಲಿ

ಇತಿಹಾಸದ ಪುಟಗಳನ್ನು ತಿರುವಿ ಹಾಕಿದರೆ, ಈ ದೇಶದ ಮೇಲೆ ಸಾಕಷ್ಟು ಪ್ರಹಾರಗಳು ನಡೆದಿರುವುದು ಗೋಚರಿಸುತ್ತದೆ. ಕಳೆದುಕೊಂಡ ಸ್ವಾತಂತ್ರ್ಯವನ್ನು ಪುನರ್ ಸ್ಥಾಪಿಸುವುದಕ್ಕಾಗಿ ಸಾಕಷ್ಟು ಮಂದಿ ವೀರ ಹೋರಾಟಗಾರರು ಈ ನೆಲದಲ್ಲಿ ಜನ್ಮವೆತ್ತಿ ಬಂದಿರುವುದು ತಿಳಿದಿದ್ದೇವೆ. ಅಂತವರಲ್ಲಿ ವೀರ ಸಾವರ್ಕರ್ ಅವರ ಹೋರಾಟ ಅತ್ಯಂತ ಗಮನಾರ್ಹವಾದದು. ಸ್ವಂತಕ್ಕಾಗಿ ಬದುಕನ್ನು ಕಟ್ಟಿಕೊಳ್ಳದೆ, ಸಂಪೂರ್ಣವಾಗಿ ದೇಶಕ್ಕಾಗಿ ಬದುಕಿದವರು ಸಾವರ್ಕರ್. ಬಲವಾದ ಧೈಯ, ಚಿಂತನೆ, ತಾಯಿ ಭಾರತಿಗೋಸ್ಕರ ಬದುಕಬೇಕೆನ್ನುವ ಹಂಬಲ ಸಾವರ್ಕರ್ ಅವರನ್ನು ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಳ್ಳುವಂತೆ ಮಾಡಿತು. ದೇಶದಲ್ಲಿ ಚಾಲ್ತಿಯಲ್ಲಿದ್ದ ವಿದೇಶಿ ವಸ್ತುಗಳನ್ನು […]

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಲಾ ಸಂಘದ ಸಮಾರೋಪ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಲಾ ಸಂಘದ ಸಮಾರೋಪ

ವಿದ್ಯಾಭ್ಯಾಸದ ಹಂತದಲ್ಲಿ ಬೇರೆ ಬೇರೆ ಚಟುವಟಿಕೆಗಳಲ್ಲಿ ನಾವು ಹೇಗೆ ತೊಡಗಿಸಿಕೊಂಡಿದ್ದೇವೆ ಎಂಬುದರ ಆಧಾರದ ಮೇಲೆ ನಮ್ಮ ಭವಿಷ್ಯದ ದಿನಗಳು ನಿಂತಿರುತ್ತವೆ ಎಂದು ವಿವೇಕಾನಂದ ಮಹಾವಿದ್ಯಾಲಯದ ವ್ಯವಹಾರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಅನ್ನಪೂರ್ಣ ಪಿ.ಜಿ ಹೇಳಿದರು. ಅವರು ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ನಡೆದ ಕಲಾಸಂಘದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ನಿರ್ದೇಶಕ ಡಾ. ಕೆ ಎನ್ ಸುಬ್ರಹ್ಮಣ್ಯ ಅವರು ಮಾತನಾಡುತ್ತಾ, ಇಂದಿನ ಕಾಲಘಟ್ಟದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ […]